More

    ವೈರಾಣುವಿನಿಂದ ರಕ್ಷಣೆ ಪಡೆಯಲು ಸ್ವಚ್ಛತೆ ಕಾಪಾಡಿ

    ಮಾನ್ವಿ: ವೈರಾಣುವಿನಿಂದ ಹರಡುವ ಕಾಯಿಲೆ ಸೊಳ್ಳೆಗಳು ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಇದರಿಂದ ರಕ್ಷಣೆ ಮಾಡಿಕೊಳ್ಳಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ತಿಳಿಸಿದರು.

    ಅಮರೇಶ್ವರ ಕ್ಯಾಂಪ್‌ನಲ್ಲಿ ಪೋತ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದರು. ತೊಟ್ಟಿ ಮುಂತಾದವುಗಳಲ್ಲಿ ನೀರನ್ನು ನಿರಂತರವಾಗಿ ಸಂಗ್ರಹಿಸಿದಾಗ ಈಡೀಸ್ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಮಲಗುವಾಗ ಸೊಳ್ಳೆ ಪರದೆ ಉಪಯೋಗ ಮಾಡಬೇಕು ಎಂದರು.

    ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ರಕ್ತಸ್ರಾವ, ಕೀಲುಗಳಲ್ಲಿ ನೋವು, ಊತ ಕಂಡು ಬಂದರೆ ಕೂಡಲೇ ತಜ್ಞ ವೈದ್ಯರಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts