More

    ಎರಡನೇ ಮಗುವಿಗೆ ಜನ್ಮ ನೀಡಿದ ವಿರುಷ್ಕಾ ದಂಪತಿ

    ಮುಂಬೈ: ಟೀಂ ಇಂಡಿಯಾದ ಸ್ಟಾರ್​ ಬ್ಯಾಟ್ಸ್​ಮನ್​ ವಿರಾಟ್​ ಕೊಹ್ಲಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿರಾಟ್​ ಮಗುವಿಗೆ ಈಗಾಗಲೇ ‘ಅಕಾಯ್‌’ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.

    ಫೆಬ್ರವರಿ 15ರಂದು ನಾವು ನಮ್ಮ ಮನೆಗೆ ವಾಮಿಕಾಳ ಕಿರಿಯ ಸಹೋದರ ಅಕಾಯ್​ನನ್ನು ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತಸ ಪಡುತ್ತೇವೆ. ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ನಾವು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಗೌರವಿಸಲು ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ವಿರಾಟ್​ ಕೊಹ್ಲಿ ಪೋಸ್ಟ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts