More

    ಕ್ರಿಕೆಟಿಗ ಕಾರಿಯಪ್ಪಗೆ ಒಂದೇ ಗಂಟೆಯಲ್ಲಿ ವೀಸಾ!-ಡಿಎಸ್‌ಜಿಐ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ

    ಬೆಂಗಳೂರು : ಕ್ರಿಕೆಟಿಗ ಕೆ.ಸಿ.ಕಾರಿಯಪ್ಪಗೆ ಪೊಲೀಸ್ ಕ್ಲಿಯರೆನ್ಸ್ ನೀಡಿದ 60 ನಿಮಿಷಗಳಲ್ಲಿ ವೀಸಾ ಕ್ಲಿಯರೆನ್ಸ್ ಒದಗಿಸಿ ನುಡಿದಂತೆ ನಡೆದ ಡೆಪ್ಯೂಟಿ ಸಾಲಿಸಿಟರಿ ಜನರಲ್ ಎಚ್.ಶಾಂತಿ ಭೂಷಣ ಕಾರ್ಯವೈಖರಿ ಹಾಗೂ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಕ್ರಮಕ್ಕೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

    ತಮ್ಮ ವಿರುದ್ಧ ದಾಖಲಾದ ಪ್ರಕರಣದಿಂದಾಗಿ ಪೊಲೀಸ್ ಕ್ಲಿಯರೆನ್ಸ್ ಹಾಗೂ ವೀಸಾ ದೊರೆಯದ ಕಾರಣ ಕ್ರಿಕೆಟ್ ಆಡಲು ಇಂಗ್ಲೆಂಡ್‌ಗೆ ಪ್ರಯಾಣಿಸಲು ಅಡ್ಡಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸ್ ಕ್ಲಿಯರೆನ್ಸ್ ಕೋರಿ ಕೆ.ಸಿ.ಕಾರಿಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

    ಈ ಹಿಂದಿನ ವಿಚಾರಣೆ ವೇಳೆ ಪೋಲಿಸ್ ಕ್ಲಿಯರೆನ್ಸ್ ನೀಡಿದ 60 ನಿಮಿಷಗಳಲ್ಲಿ ವೀಸಾ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರದ ಪರ ಡಿಎಸ್‌ಜಿಐ ಎಚ್.ಶಾಂತಿಭೂಷಣ್ ಭರವಸೆ ನೀಡಿದ್ದರು. ಇದೀಗ ಕೋರ್ಟ್ ಸೂಚನೆ ಮೇರೆಗೆ ನಗರದ ಪೋಲಿಸ್ ಇಲಾಖೆಯಿಂದ ಕ್ಲಿಯರೆನ್ಸ್ ದೊರಕಿದ 60 ನಿಮಿಷಗಳಲ್ಲೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಕಾರಿಯಪ್ಪಗೆ ವೀಸಾ ಒದಗಿಸಿಕೊಟ್ಟಿತು ಎಂದು ಕೇಂದ್ರ ಸರ್ಕಾರದ ಪರ ವಕೀಲ ಶಾಂತಿಭೂಷಣ ಮಾಹಿತಿ ನೀಡಿದರು.

    ಇದನ್ನು ಪರಿಗಣಿಸಿದ ನ್ಯಾಯಪೀಠ ಅಭೂತಪೂರ್ವವಾಗಿ ಕೇವಲ 60 ನಿಮಿಷಗಳಲ್ಲಿ ವೀಸಾ ಒದಗಿಸಿದ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಕ್ರಮಕ್ಕೆ ಹಾಗೂ ಡಿಎಸ್‌ಜಿಐ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅರ್ಜಿ ಇತ್ಯರ್ಥ ಪಡಿಸಿರುವುದಾಗಿ ಆದೇಶಿಸಿದೆ.

    ಏನಿದು ಪ್ರಕರಣ?

    ಕೆ.ಸಿ ಕಾರಿಯಪ್ಪ ಮೇಲೆ ಯುವತಿಯೊಬ್ಬಳು ಆತ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು, ಈಗ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಬಳಿಕ ಪ್ರಕರಣ ಸಂಬಂಧ ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಕೆ.ಸಿ.ಕಾರಿಯಪ್ಪಗೆ ವಿದೇಶಿ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿತ್ತು. ತಾವು ಕ್ರಿಕೆಟ್ ಆಡಲು ಇಂಗ್ಲೆಂಡ್‌ಗೆ ಪ್ರಯಾಣಿಸಬೇಕಿದೆ. ಆದರೆ, ಪೊಲೀಸ್ ಕ್ಲಿಯರೆನ್ಸ್ ಸಿಗದೇ ತಮಗೆ ಅಡ್ಡಿಯಾಗುತ್ತಿದೆ ಎಂದು ಪೊಲೀಸ್ ಕ್ಲಿಯರೆನ್ಸ್ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts