ಅರ್ಧಕ್ಕೆ ಬಂತು 'ಆ ಒಂದು ಕನಸು'!

WhatsApp Image 2021-01-09 at 2.09.27 PM
Published on

ಬೆಂಗಳೂರು: ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ 'ಆ ಒಂದು ಕನಸು' ಚಿತ್ರ ಕಳೆದ ತಿಂಗಳು ಸೆಟ್ಟೇರಿತ್ತು. ಸದ್ಯ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಅರ್ಧದಷ್ಟು ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿಷ್ಣು ನಾಚನೇಕರ್ ನಿರ್ದೇಶಿಸುತ್ತಿದ್ದಾರೆ. ಕೆ.ಉದಯಂ ಕಥೆ, ಚಿತ್ರಕಥೆ ಹಾಗೂ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವೀನಸ್ ಮೂರ್ತಿ‌ ಛಾಯಾಗ್ರಹಣ, ಅಭಿಷೇಕ್ ಜೆ ರಾಯ್ ಸಂಗೀತ ನಿರ್ದೇಶನ, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಹಾಗೂ ಹೈಟ್ ಮಂಜು, ಸ್ಟಾರ್ ಗಿರಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

'ಆ ಒಂದು ಕನಸು' ಚಿತ್ರದಲ್ಲಿ ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿವೆ. ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ವಿಶ್ವಾಸ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಬಾಲ ರಾಜವಾಡಿ, ಅಮಿತ್ ದಿವ್ಯಶ್ರೀ, ಗಿರೀಶ್ ಶಿವಣ್ಣ, ರಮೇಶ್ ಭಟ್, ಗಿರಿಜಾ ಲೋಕೇಶ್, ಕುರಿ ಬಾಂಡ್ ರಂಗ, ಹರ್ಷವರ್ಧನ್, ಶ್ವೇತಾರಾವ್, ಜಯಶ್ರೀ, ನಾರಾಯಣ ಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net