ಬೆಂಗಳೂರು: ‘ಸಾಹಸಸಿಂಹ’ ವಿಷ್ಣುವರ್ಧನ್ ಅವರ ಗುಂಗಲ್ಲೇ, ಅವರ ಇಮೇಜ್ನ ಹ್ಯಾಂಗೋವರ್ನಲ್ಲೇ ಬಂದ ಸಿನಿಮಾಗಳು ಹಲವು. ನಟ ಸುದೀಪ್ ಅಭಿನಯದ ‘ವಿಷ್ಣುವರ್ಧನ’, ‘ಕೋಟಿಗೊಬ್ಬ2’, ‘ಕೋಟಿಗೊಬ್ಬ3’, ಯಶ್ ಅಭಿನಯದ ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ’, ಇತ್ತೀಚೆಗಷ್ಟೇ ತೆರೆಕಂಡ ‘ರಾಮಾಚಾರಿ 2.0’.. ಹೀಗೆ ಹಲವು ಉದಾಹರಣೆಗಳನ್ನು ಕೊಡಬಹುದು.
ವಿಷ್ಣುವರ್ಧನ್ ಅಭಿನಯದ ‘ನಾಗರಹಾವು’ ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ. ಇದಾದ ಕೆಲವು ಹಲವು ವರ್ಷಗಳ ಬಳಿಕ ರಿಯಲ್ಸ್ಟಾರ್ ಉಪೇಂದ್ರ ಅಭಿನಯದಲ್ಲೂ ‘ನಾಗರಹಾವು’ ಎಂಬ ಸಿನಿಮಾ ಮೂಡಿಬಂದಿತ್ತು. ಈಗ ವಿಷ್ಣುವರ್ಧನ್ ಅವರ ಅದೇ ‘ನಾಗರಹಾವು’ ಚಿತ್ರದಲ್ಲಿ ಪ್ರೇಕ್ಷಕರ ಮನಗೆದ್ದು ಅಚ್ಚೊತ್ತಿರುವ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳ ಹೆಸರನ್ನೇ ಪ್ರಧಾನವಾಗಿ ಇರಿಸಿಕೊಂಡು ಸಿನಿಮಾವೊಂದು ಮೂಡಿಬರಲಿದೆ. ‘ಮಾರ್ಗರೇಟ್- ಲವರ್ ಆಫ್ ರಾಮಾಚಾರಿ’ ಎಂಬುದೇ ಈ ನೂತನ ಸಿನಿಮಾದ ಶೀರ್ಷಿಕೆ.
ಇದನ್ನೂ ಓದಿ: ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!
ಯುವ ಪ್ರತಿಭೆ ಅಭಿಲಾಷ್ ಹಾಗೂ ನಟಿ ಸೋನಲ್ ಮೊಂತೆರೋ ನಾಯಕ-ನಾಯಕಿಯಾಗಿ ನಟಿಸುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಬಂಡೇ ಮಹಾಕಾಳಿ ಸನ್ನಿಧಿಯಲ್ಲಿ ನೆರವೇರಿತು. ನಟ-ನಿರ್ಮಾಪಕ ಡಾಲಿ ಧನಂಜಯ್ ಹೊಸ ಸಿನಿಮಾಗೆ ಶುಭ ಹಾರೈಸಿದರು.
ಇದನ್ನೂ ಓದಿ: ರಾಹುಲ್ ಗಾಂಧಿ, ಸ್ವಾಮೀಜಿದ್ವಯರ ಸಮ್ಮುಖದಲ್ಲಿ ಸಿದ್ದರಾಮಯ್ಯಗೆ ಸಿಗಲೇ ಇಲ್ಲ ಭಾಷಣ ಅವಕಾಶ; ಕಾರಣವೇನು?
ಅಭಿ ಬಡವ ರಾಸ್ಕಲ್, ಹೊಯ್ಸಳದಲ್ಲಿ ಸಣ್ಣ ಪಾತ್ರ ಮಾಡಿದ್ದಾನೆ. ಆತ ಅಭಿಮಾನಿಯಾಗಿ ಪರಿಚಯ. ಈಗ ಹೀರೋ ಆಗುತ್ತಿದ್ದಾನೆ. ಸುಮಾರು ವರ್ಷಗಳ ಪ್ರಯತ್ನ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಧನಂಜಯ್ ಹಾರೈಸಿದರು.
ಈ ಚಿತ್ರದ ಮೂಲಕ ಇವತ್ತಿನ ಸಮಾಜಕ್ಕೆ ಬೇಕಿರುವ ಸಂದೇಶ ಕೊಡಲಿದ್ದೇವೆ. ನಾಗರಹಾವು ಸಿನಿಮಾದ ಪಾತ್ರಗಳು ಲೆಜೆಂಡ್ ಪಾತ್ರಗಳು. ಅವುಗಳನ್ನು ನಾವು ಮುಟ್ಟಲಾಗುವುದಿಲ್ಲ. ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಅನ್ನೋದೇ ಕಥೆ. ಮೇ 15ರಂದು ಶೂಟಿಂಗ್ ಶುರುವಾಗಲಿದೆ ಎಂದು ನಿರ್ದೇಶಕ ಗಿರಿಧರ್ ಕುಂಬಾರ್ ಚಿತ್ರದ ಕುರಿತು ವಿವರಣೆ ನೀಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಹೊತ್ತಿಸಿದ ಲಿಂಗಾಯತ ಕಿಡಿ: ಕೈ ನಾಯಕನ ವಿರುದ್ಧ ಕಮಲ ಪಡೆ ವಾಗ್ದಾಳಿ
ಬಹಳ ಸಂತೋಷ ಆಗಿದೆ. ಧನಂಜಯ್ ಬಂದಿರುವುದು ಖುಷಿಕೊಟ್ಟಿದೆ. ಎಲ್ಲವೂ ಹೊಸಮುಖ. ಒಳ್ಳೆಯ ಯುವಕರಿದ್ದಾರೆ. ಅವರ ಭವಿಷ್ಯ ಈ ಚಿತ್ರದಲ್ಲಿದೆ. ಈ ಸಿನಿಮಾ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ನಿರ್ಮಾಪಕ ಹರೀಶ್ ಹೇಳಿದರು.
ಇಂದು ತುಂಬಾ ಭಾವುಕ ದಿನ, ಇವತ್ತು ಕಷ್ಟಪಟ್ಟು ಇಲ್ಲಿ ಕೂತಿದ್ದೇನೆ. ಇದಕ್ಕೆ ಮೂಲ ಕಾರಣ ನಿರ್ಮಾಪಕರು. ನನ್ನ ಒದ್ದಾಟಗಳನ್ನು ಬಹಳ ಹತ್ತಿರದಿಂದ ನೋಡಿದ್ದಾರೆ. ಇವರೇ ನನ್ನ ಅನ್ನದಾತರು. ಧನಂಜಯ್ ಅವರು ಹೇಳಿಕೊಟ್ಟ ಮಾರ್ಗದರ್ಶನಲ್ಲಿ ನಾನು ನಡೆಯುತ್ತಿದ್ದೇನೆ. ಈಗ ಅವರು ನನ್ನ ಚಿತ್ರಕ್ಕೆ ಹಾರೈಸಿರುವುದು ಖುಷಿಕೊಟ್ಟಿದೆ ಎಂದು ನಾಯಕ ಅಭಿಲಾಷ್ ಹೇಳಿದರು. ನಾಯಕಿ ಸೋನಲ್ ಮೊಂತೆರೋ ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ಇದನ್ನೂ ಓದಿ: ಶ್ರೀರಾಮುಲು ಮಾತ್ರವಲ್ಲ, ಅವರ ಪತ್ನಿ ಮತ್ತು ಮಕ್ಕಳಿಬ್ಬರೂ ಕೋಟ್ಯಧಿಪತಿಗಳು!
ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್ ಈ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಷ್ ಗುರುತಿಸಿಕೊಂಡಿದ್ದರು. ನಾಗರಹಾವು ಸಿನಿಮಾದಲ್ಲಿನ ಪಾತ್ರಗಳ ಹೆಸರುಗಳನ್ನು ಹೋಲುವ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿನ ಪಾತ್ರಗಳಿಗೂ ಇಡಲಾಗಿದೆ.
ಇದನ್ನೂ ಓದಿ: ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್ಡಿಕೆ ಪ್ರಶ್ನೆ
ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂತೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಅವಿನಾಶ್ ಮತ್ತು ರವಿಶಂಕರ್ ಮುಂತಾದವರು ಕೂಡ ನಟಿಸುತ್ತಿದ್ದಾರೆ.
ವನಿತಾ ಎಚ್.ಎನ್. ಅವರ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಮುಹೂರ್ತ ನೆರವೇರಿದ್ದು, ಮೇ 15ರಂದು ಚಿತ್ರದುರ್ಗದಲ್ಲಿ ಶೂಟಿಂಗ್ ಶುರುವಾಗಲಿದೆ.
ಸಿನಿಮಾ ನಿರ್ದೇಶಕ-ನಿರ್ಮಾಪಕರಿಗೆ ಸಿಹಿಸುದ್ದಿ; ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಅರ್ಜಿ ಆಹ್ವಾನ
ತಾಯಿ-ಮಗಳು ಇಬ್ಬರೂ ಒಟ್ಟಿಗೇ ಪಿಯುಸಿ ಪಾಸ್; 45ನೇ ವಯಸ್ಸಲ್ಲಿ ಮಹಿಳೆಯ ಸಾಧನೆ