ಮಾನ್ವಿ: ವಕ್ಫ್ ಮೂಲಕ ಸಾರ್ವಜನಿಕ ಆಸ್ತಿಗಳನ್ನು ಕಬಳಿಸುತ್ತಿರುವುದನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಬಜರಂಗ ದಳ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವ ವೃತ್ತದಿಂದ ತಹಸಿಲ್ ಕಚೇರಿವರೆಗೆ ಪ್ರತಿಭಟನೆ ಮೂಲಕ ತೆರಳಿ ತಹಸೀಲ್ದಾರ್ ರಾಜು ಪಿರಂಗಿಗೆ ಮನವಿ ಸಲ್ಲಿಸಿದರು.
ರೈತರ ಜಮೀನುಗಳು, ಹಿಂದು ದೇವಸ್ಥಾನಗಳು, ಮಠಗಳ ಆಸ್ತಿಗಳು ಹಾಗೂ ಸರ್ಕಾರದ ಆಸ್ತಿಗಳನ್ನು ವಕ್ಫ್ ಆಸ್ತಿಗಳನ್ನಾಗಿ ಮಾಡುತ್ತಿರುವುದು ಖಂಡನೀಯ. ಉತ್ತರ ಕರ್ನಾಟಕದ ವಿಜಯಪುರ, ಯಾದಗಿರಿ, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅನೇಕ ರೈತರ ಜಮೀನುಗಳು, ಮಠ, ಮಂದಿರಗಳ ಪಹಣಿಗಳ ಕಾಲಂ ನಂಬರ್ 11 ರಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು.
ರಾಜ್ಯ ಸರ್ಕಾರವು ವಕ್ಫ್ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.