More

    ಸಕಲೇಶಪುರದಲ್ಲಿ ವಿವಿಧ ಸೇವಾ ಕಾರ್ಯಗಳು

    ಸಕಲೇಶಪುರ: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಪ್ರಯುಕ್ತ ಪಟ್ಟಣದಲ್ಲಿ ಸೋಮವಾರ ವಿವಿಧ ಸೇವಾ ಕಾರ್ಯಗಳು ನೆರವೇರಿದವು.

    ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದ ಅವರಣದಲ್ಲಿ ಬಜರಂಗದಳ, ವಿಶ್ವ ಹಿಂದು ಪರಿಷತ್ ಹಾಗೂ ದುರ್ಗಾ ವಾಹಿನಿ ವತಿಯಿಂದ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ನಾಗರಿಕರಿಗೆ ವ್ಯವಸ್ಥೆ ಮಾಡಲಾಗಿತ್ತು. ಹಳೇ ಬಸ್ ನಿಲ್ದಾಣದಲ್ಲಿ ಸಮಾನ ಮನಸ್ಕರ ವೇದಿಕೆಯಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು.

    ಪಟ್ಟಣದ ಹಳೇ ಸಂತವೇರಿ ನಾಗರಿಕರ ವೇದಿಕೆಯಿಂದ ಬಡಾವಣೆಯ ಮುಖ್ಯರಸ್ತೆಯಲ್ಲಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಸಿಂಗರಿಸಲಾಗಿತ್ತು. ಶನೈಶ್ಚರ ದೇವಾಲಯದಿಂದ ರಾಮರಥವನ್ನು ಬಡಾವಣೆಯ ವೃತ್ತದವರೆಗೆ ಎಳೆದು ತಂದು ಧಾರ್ಮಿಕ ಕಾರ್ಯ ನೆರವೇರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮಡಿಲಕ್ಕಿ ನೀಡಿ ಗೌರವಿಸಲಾಯಿತು. ನಂತರ ಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಸಭಾ ಕಾರ್ಯಕ್ರಮದಲ್ಲಿ ವಾಗ್ಮಿ ಹಾರಿಕ ಮಂಜುನಾಥ್, ಶಾಸಕ ಸಿಮೆಂಟ್ ಮಂಜು ಮಾತನಾಡಿದರು. ಸಕಲೇಶ್ವರಸ್ವಾಮಿ, ಹೊಳೆಮಲ್ಲೇಶ್ವರಸ್ವಾಮಿ ದೇವಾಲಯಗಳು ಸೇರಿದಂತೆ ತಾಲೂಕಿನ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts