ವಿಶ್ವ ವಿದ್ಯಾಲಯ ಮುಚ್ಚಿಸುವುದು ಅನ್ಯಾಯ; ಬಸವರಾಜ ಬೊಮ್ಮಾಯಿ

blank

ಹಾವೇರಿ: ಜಲ ಜೀವನ್​ ಮೀಷನ್​ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯವೇನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ. ಈ ಕುರಿತು ಸಂಬಂಧ ಪಟ್ಟ ಸಚಿವರ ಜತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನಗರದ ತಾಪಂಯ ತಮ್ಮ ಜನ ಸಂಪರ್ಕ ಕಚೇರಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಿಂದ ಜಲ ಜೀಪನ್​ ಮಿಷನ್​ ಯೋಜನೆ ನಡೆಯುತ್ತಿದೆ. ಕೇಂದ್ರ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಿದೆ. ರಾಜ್ಯ ಸರ್ಕಾರ ಖರ್ಚು ಮಾಡಿದ ಮೇಲೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಖಜಾನೆ ಖಾಲಿ ಮಾಡಿಕೊಂಡು ಸಂರ್ಪೂಣ ದಿವಾಳಿಯಾಗಿ ಹಣ ಖರ್ಚು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಖರ್ಚು ಮಾಡಿದ ಮೇಲೆ ಅದರ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೆ, ಖರ್ಚು ಮಾಡಿದ ಎಲ್ಲ ಹಣವೂ ರಾಜ್ಯ ಸರ್ಕಾರಕ್ಕೆ ಬರುತ್ತದೆ. ನಾವೂ ಕೂಡ ರಾಜ್ಯ ಸರ್ಕಾರಕ್ಕೆ ಸಹಕಾರ ಮಾಡುತ್ತೇವೆ ಎಂದರು.
ವಿವಿ ಮುಚ್ಚುವುದು ಅನ್ಯಾಯ…
ರಾಜ್ಯ ಸರ್ಕಾರ ಹೊಸ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿಶ್ವ ವಿದ್ಯಾಲಯಗಳ ಪರಿಕಲ್ಪನೆ ಬದಲಾವಣೆಯಾಗಿದೆ. ರಾಜ್ಯದಲ್ಲಿ ಐವತ್ತು ಆರವತ್ತನೇ ದಶಕದಲ್ಲಿ ವಿಶ್ವ ವಿದ್ಯಾಲಯಗಳು ಸ್ಥಾಪನೆಯಾಗಿದ್ದವು. ಆವತ್ತಿನ ಕಾಲೇಜು ಸಂಖ್ಯೆ. ವಿದ್ಯಾಥಿರ್ಗಳ ಸಂಖ್ಯೆಗೂ ಇಂದಿಗೂ ಬಹಳ ವ್ಯತ್ಯಾಸ ಇದೆ. ನಾವು ಹಿಂದುಳಿದ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಎಸ್ಸಿ ಎಸ್ಟಿ, ಹಿಂದುಳಿದ ವಿದ್ಯಾಥಿರ್ಗಳಿಗೆ ಅನುಕೂಲ ಆಗಲಿ ಎಂದು ವಿಶ್ವ ವಿದ್ಯಾಲಯ ಮಾಡದ್ದೇವೆ.
ಈ ವಿಶ್ವ ವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬೇಕಿಲ್ಲ. ಆದರೂ ಒಂದು ನಯಾ ಪೈಸೆಯನ್ನು ಕಾಂಗ್ರೆಸ್​ ಸರ್ಕಾರ ನೀಡಿಲ್ಲ. ಆದರೂ, ವಿದ್ಯಾಥಿರ್ಗಳು ನೀಡುವ ಫೀ ಇಂದಲೇ ವಿಶ್ವ ವಿದ್ಯಾಲಯಗಳನ್ನು ನಡೆಸುತ್ತಿದ್ದಾರೆ. ಎಲ್ಲವೂ ಪಿಜಿ ಕೇಂದ್ರದಲ್ಲಿಯೇ ನಡೆಯುತ್ತಿರುವುದರಿಂದ ಸರ್ಕಾರ ಯಾವುದೇ ಭೂಮಿಯನ್ನು ನೀಡಿಲ್ಲ್ಲ. ಡಿಜಿಟಲ್​ ಶಿಕ್ಷಣ, ದೂರ ಶಿಕ್ಷಣ ಎಲ್ಲವನ್ನೂ ಸಮರ್ಪಕವಾಗಿ ಮಾಡುತ್ತಿದ್ದಾರೆ. ಜಿಲ್ಲೆಯ ಎಸ್ಸಿ ಎಸ್ಟಿ, ಒಬಿಸಿ ವಿದ್ಯಾಥಿರ್ಗಳು ಹಾಗೂ ಹೆಣ್ಣು ಮಕ್ಕಳಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಿದೆ. ಇದನ್ನು ಸ್ಥಗಿತಗೊಳಿಸಿದರೆ ಎಸಿ, ಎಸ್ಸಿ ಒಬಿಸಿ ಹಾಗೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ. ಈಗಾಗಲೇ ಎಲ್ಲ ಜಿಲ್ಲೆಯ ಜನರು, ವಿದ್ಯಾಥಿರ್ಗಳು, ಪೋಷಕರು, ಬುದ್ದಿ ಜೀವಿಗಳು ವಿರೋಧ ಮಾಡುತ್ತಿದ್ದಾರೆ. ಇವುಗಳನ್ನು ಅಲ್ಪ ದುಡ್ಡಿನಲ್ಲಿಯೇ ಬಲವರ್ಧನೆ ಮಾಡದೆ ಅವುಗಳನ್ನು ಮುಚ್ಚಿಸುವ ಕೆಲಸ ಮಾಡುತ್ತಿರುವುದು ಘೋರ ಅನ್ಯಾಯ ಎಂದರು.
ಗೋದಾವರಿ ಕಾವೇರಿ ನದಿ ಜೋಡಣೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇವೇಗೌಡರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಖಂಡಿತವಾಗಿಯೂ ರಾಜ್ಯಕ್ಕೆ ಅನ್ಯಾಯವಾಗಿದ್ದರೆ ನಾವು ಯಾವಾಗಲೂ ಪಕ್ಷಾತಿತವಾಗಿಯೇ ಹೋರಾಟ ಮಾಡುತ್ತೇವೆ ಎಂದರು.
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲುಳಿತದಿಂದ ಕುಂಭಮೇಳಕ್ಕೆ ತೆರಳುವ ಭಕ್ತರು ಸಾವಿಗೀಡಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೋ ತಪ್ಪು ಮಾಹಿತಿ ನೀಡಿದ್ದರಿಂದ ಅಲ್ಲಿ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದರು.

blank
Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank