More

    ವಿಶ್ವಗುರು ನಮ್ಮ ಹೆಮ್ಮೆ

    ರಾಯಬಾಗ: ವಿಶ್ವವೇ ಬಸವಣ್ಣನವರನ್ನು ವಿಶ್ವಗುರು ಎಂದು ಒಪ್ಪಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಹಸೀಲ್ದಾರ್ ಪಿ.ಎಸ್.ಚನಗೊಂಡ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಆದೇಶದ ಮೇರೆಗೆ ತಾಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸಿ ಪ್ರತಿ ಕಚೇರಿಯಲ್ಲಿ ಅವರ ಭಾವಚಿತ್ರ ಅನಾವರಣಗೊಳಿಸುವಂತೆ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದರು.

    ಗ್ರೇಡ್-2 ತಹಸೀಲ್ದಾರ್ ಪರಮಾನಂದ ಮಂಗಸೂಳಿ ಮಾತನಾಡಿ, ಬಸವಣ್ಣನವರ ವಚನಗಳಲ್ಲಿರುವ ತತ್ತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗೋಣ ಎಂದರು.

    ತಾಪಂ ಇಒ ಆರ್.ಬಿ.ಮನವಡ್ಡರ, ಸಿಡಿಪಿಒ ಸಂತೋಷಕುಮಾರ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಚಂದರಗಿ, ಪಪಂ ಮುಖ್ಯಾಧಿಕಾರಿ ಎಸ್.ಆರ್.ಮಾಂಗ, ಪಶು ಇಲಾಖೆ ಅಧಿಕಾರಿ ಸಚಿನ ಸೌಂದಲಗಿ, ಆರ್.ಎಸ್.ಪಾಟೀಲ, ಎಚ್.ಎಲ್.ಪೂಜಾರಿ, ಅಶೋಕ ಅಂಗಡಿ, ಸಂಜಯ ಕುಸ್ತಿಗಾರ, ಮಹೇಶ ಹಿರೇಮಠ, ತ್ಯಾಗರಾಜ ಕದಂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts