ರಘು ಆಚಾರ್ ಗೆ ಸಚಿವ ಸ್ಥಾನ ನೀಡಿ

ಯಾದಗಿರಿ: ವಿಧಾನ ಪರಿಷತ್ ಸದಸ್ಯ, ವಿಶ್ವಕರ್ಮ ಸಮಾಜದ ಹಿರಿಯ ಮುಖಂಡ ರಘು ಆಚಾರ್ ಅವರಿಗೆ ಸಮ್ಮಿಶ್ರ ಸಕರ್ಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಏಕದಂಡಗಿ ಮಠದ ಪೀಠಾಧಿಪತಿ ಶ್ರೀ ಗುರುನಾಥೇಂದ್ರ ಸರಸ್ವತಿ ಸ್ವಾಮೀಜಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 40 ಲಕ್ಷದಷ್ಟಿರುವ ವಿಶ್ವಕರ್ಮ ಸಮಾಜ ಪಂಚಕುಲ ಕಸಬನ್ನೇ ನಂಬಿ ಜೀವನ ಸಾಗಿಸುತ್ತ ಬಂದಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳು ನಮ್ಮ ಬಗ್ಗೆ ಒಳ್ಳೆಯ ಮಾತುಗಳನ್ನಾಡಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿವೆ. ಆದರೆ ರಾಜಕೀಯವಾಗಿ ಸಮಾಜಕ್ಕೆ ಯಾವುದೇ ಪ್ರಾತಿನಿಧ್ಯ ಕೊಡುತ್ತಿಲ್ಲ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ರಘು ಆಚಾರ್ ಸತತ 2 ಬಾರಿ ಮೇಲ್ಮನೆಗೆ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ನಲ್ಲಿ ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಈ ಸಮ್ಮಿಶ್ರ ಸಕರ್ಾರದಲ್ಲಿ ಮಂತ್ರಿ ಸ್ಥಾನ ನೀಡುವ ಮೂಲಕ ಆಥರ್ಿಕ, ರಾಜಕೀಯವಾಗಿ ಹಿಂದುಳಿದ ವಿಶ್ವಕರ್ಮ ಸಮಾಜಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *