

ಸುಬ್ರಹ್ಮಣ್ಯ: ದ.ಕ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ವಿಶ್ವಕರ್ಮ ಜಯಂತಿ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು.
ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಉದ್ಘಾಟಿಸಿದರು. ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ ಅಧ್ಯಕ್ಷತೆ ವಹಿಸಿ ವಿಶ್ವಕರ್ಮ ಜಯಂತಿ ಬಗ್ಗೆ ತಿಳಿಸಿದರು.
ಉಪನ್ಯಾಸಕಿ ನಳಿನಾಕ್ಷಿ ಕಲ್ಮಡ್ಕ ವಿಶ್ವಕರ್ಮ ದಿನಾಚರಣೆ ಮಹತ್ವ ತಿಳಿಸಿದರು. ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಪ್ರದೀಪ್ ರೈ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಶಶಿಧರ ಕಲ್ಮಂಜ, ಜಿಲ್ಲಾ ಒಬಿಸಿ ಕಾರ್ಯದರ್ಶಿಗಳಾದ ಚಂದ್ರಶೇಖರ ಪನೆ, ಸದಾನಂದ ಆಚಾರ್ಯ ಉಪಸ್ಥಿತರಿದ್ದರು. ಒಬಿಸಿ ಮೋರ್ಚಾ ಮಂಡಲ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ ಸ್ವಾಗತಿಸಿದರು. ಮಂಡಲ ಒಬಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಅಡ್ಕರ್ ವಂದಿಸಿದರು. ವಿಜಯ್ ಕುಮಾರ್ ಚಾರ್ಮತ, ಆರ್.ಸಿ.ನಾರಾಯಣ ರೆಂಜ ಕಾರ್ಯಕ್ರಮ ನಿರೂಪಿಸಿದರು.