ವಿಶ್ವಕರ್ಮರ ವಾಸ್ತುಶಿಲ್ಪ ಕಲೆ ಅನನ್ಯ:ಬಿವೈಆರ್ ಬಣ್ಣನೆ

vishwakarma

ಶಿವಮೊಗ್ಗ: ವಿಶ್ವಕರ್ಮ ವಾಸ್ತುಶಿಲ್ಪಿಗಳ ಪ್ರಧಾನ ದೇವರು. ಅವರನ್ನು ಪ್ರಪಂಚದ ದೈವಿಕ ಇಂಜಿನಿಯರ್ ಎಂದೇ ಕರೆಯಲಾಗುತ್ತದೆ. ಅವರು ರೂಪಿಸಿದ ವಾಸ್ತುಶಿಲ್ಪವನ್ನು ಇಂದಿನ ತಾಂತ್ರಿಕ ಯುಗದಲ್ಲೂ ನಿರ್ಮಿಸುವುದು ಕಷ್ಟ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾದಿಂದ ಮಂಗಳವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಕರ್ಮ ಜಯಂತಿ ಪವಿತ್ರವಾದ ದಿನ. ಬ್ರಹ್ಮನ ಮಗ ವಿಶ್ವಕರ್ಮನು ಶಿಲ್ಪಕಲೆ, ವಾಸ್ತುಶಿಲ್ಪ ಕರಕುಶಲವನ್ನು ಜಗತ್ತಿಗೆ ನೀಡಿದವನು. ತಾಂತ್ರಿಕತೆ ಎಷ್ಟೇ ಬೆಳೆದಿದ್ದರೂ ಕಲೆ, ಸಾಹಿತ್ಯ, ಕೌಶಲಗಳನ್ನು ಯಂತ್ರಗಳಿಂದ ಸೃಷ್ಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಶಲಕರ್ಮಿಗಳ ಒಳಿತಿಗೆ ಹಾಗೂ ಯುವಜನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿ ಎಂಬ ಮಹದುದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದು 8 ರಿಂದ 10 ಕೋಟಿ ಯುವ ಕುಶಲಕರ್ಮಿಗಳ ವೃತ್ತಿ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಮಾತನಾಡಿ, ವಿಶ್ವಕರ್ಮ ಧರ್ಮ, ಸಂಸ್ಕೃತಿಯ ಪ್ರತಿಬಿಂಬ. ಈ ಸಮಾಜ ಶಿಲ್ಪ ಸಂಸ್ಕೃತಿ ಬೆಳೆಸಿದೆ. ಜನ ಸಾಮಾನ್ಯರು, ಬಡವರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹರೆಲ್ಲರೂ ಇದರ ಲಾಭ ಪಡೆಯಬೇಕು ಎಂದು ಹೇಳಿದರು.
ವಿಶ್ವಕರ್ಮ ಸಮಾಜದ ಮುಖಂಡ ಎಸ್.ರಾಮು ಮಾತನಾಡಿ, ಮೊದಲು ವಿಶ್ವಕರ್ಮ ಸಮುದಾಯವನ್ನು ಒಗ್ಗೂಡಿಸಲು ಪೂಜಾ ಕಾರ್ಯ ಮಾಡುತಿದ್ದೆವು. ಇದೀಗ ಸರ್ಕಾರ ವಿಶ್ವಕರ್ಮ ಜಯಂತಿ ಆಚರಣೆಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತಂದು ಕುಶಲಕರ್ಮಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ವಿಶ್ವಕರ್ಮ ಸಮಾಜದಲ್ಲಿ 42 ಉಪ ಪಂಗಡಗಳಿದ್ದು ಎಲ್ಲರೂ ಒಗ್ಗೂಡಬೇಕು ಎಂದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ವಿಶ್ವಕರ್ಮ ಬ್ರಾಹ್ಮಣರ ಸಂಘದ ಅಧ್ಯಕ್ಷ ಸೋಮಾಚಾರಿ, ಮುಖಂಡರಾದ ನಿರಂಜನಮೂರ್ತಿ, ಶ್ರೀನಿವಾಸ್, ಎಚ್.ಎಂ.ಲೀಲಾ ಮೂರ್ತಿ, ರೂಪಾ ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಇತರರಿದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…