ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ

ವಿಶ್ವಕರ್ಮ ಸಮುದಾಯದ ಮುಖಂಡ ಶ್ರೀನಿವಾಸ ಆಚಾರ್ಯ ಅಭಿಪ್ರಾಯ

ರಾಮನಗರ : ನಮ್ಮ ಇತಿಹಾಸವನ್ನು ಕಟ್ಟಿಕೊಡುವಲ್ಲಿ ಪ್ರಾಚೀನ ಸ್ಮಾರಕಗಳು ಮತ್ತು ಮಹಲುಗಳು ಪ್ರಮುಖ ಪಾತ್ರ ವಹಿಸುತ್ತವೆ, ಅಂತಹ ಸ್ಮಾರಕಗಳನ್ನು ನಿರ್ಮಿಸಿರುವ ನಮ್ಮ ಪೂರ್ವಿಕರ ಶ್ರಮ ಮತ್ತು ಸೃಜನಾತ್ಮಕ ಕಲೆ ಇಂದಿನ ಯುವ ಪೀಳಿಗೆಗೆ ವಾದರಿಯಾಗಬೇಕು ಎಂದು ವಿಶ್ವಕರ್ಮ ಸಮುದಾಯದ ಮುಖಂಡ ಶ್ರೀನಿವಾಸ ಆಚಾರ್ಯ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಮನಗರದ ವಿಜಯನಗರ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಾತನಾಡಿದರು.
ಪುರಾಣಗಳ ಪ್ರಕಾರ ವಿಶ್ವಕರ್ಮರು ಇಡೀ ಪ್ರಪಂಚವನ್ನು ಸಷ್ಠಿಸಿದವರು. ರಾವಾಯಣದಲ್ಲಿ ಬರುವ ಶ್ರೀಲಂಕಾ ಹಾಗೂ ಮಹಾಭಾರತದ ಇಂದ್ರಪ್ರಸ್ಥ ಪ್ರದೇಶಗಳಲ್ಲಿ ಭವ್ಯ ಅರಮನೆಯನ್ನು ವಿಶ್ವಕರ್ಮರು ನಿರ್ಮಿಸಿದ್ದರು. ಇದನ್ನು ನಾವು ಕಾಣಬಹುದು. ಜಗತ್ತಿನಲ್ಲಿ ಎಲ್ಲರನ್ನು ಹಾಗೂ ಎಲ್ಲವನ್ನೂ ಸೃಷ್ಟಿ ವಾಡಿದವರು ವಿಶ್ವಕರ್ಮರು ಹಾಗೂ ಊರುಗಳಲ್ಲಿ ಗ್ರಾಮದೇವತೆಯನ್ನು ಸೃಷ್ಟಿಸಿದರು ವಿಶ್ವಕರ್ಮ ಸಮುದಾಯದವರು ಎಂದರು.
ರಾಜ್ಯ ಸರ್ಕಾರ 2016ರಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಜಾರಿಗೆ ತಂದಿತು. ಇಂದಿನ ಆಧುನಿಕ ಇಂಜಿನಿಯರುಗಳು ಅಸಾಧ್ಯವೆನ್ನುವ ಅನೇಕ ರೀತಿಯ ಕಲೆಯನ್ನು ಬಹಳ ಹಿಂದೆಯೇ ನಮ್ಮ ದೇಶದಿಂದ ಇಡೀ ವಿಶ್ವಕ್ಕೆ ಪರಿಚಿಯಿಸಿದವರು. ವಿಶ್ವ ಸಂಸ್ಥೆಯ ವಿಶ್ವಪಾರಂಪರ್ಯ ಪಟ್ಟಿಗೆ ಸೇರಿರುವ ಅನೇಕ ಕಲ್ಲಿನ ಕೆತ್ತನೆಗಳು ಇಂದಿಗೂ ಪ್ರಪಂಚದ ಅತ್ಯುತ್ತಮ ಕಲೆಗೆ ನಿದರ್ಶನಗಳನ್ನು ಕಾಣಬಹುದು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕ್ರೀಂಡಾಗಣದಿಂದ ವಿಜಯನಗರ ಕಾಳಿಕಾಂಬ ದೇವಸ್ಥಾನದವರೆಗೆ ಬೆಳ್ಳಿರಥದಲ್ಲಿ ದೇವರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್‌ಬಾಬು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಜೆ. ಅರ್ಪಿತಾ, ತಾಲೂಕು ವೈದ್ಯಾಧಿಕಾರಿ ಡಾ. ಉವಾ, ಡಾ. ಮಧುಮತಿ ಸಾಹಿತಿ ಶೈಲಾಜಾ, ಮುಖಂಡರಾದ ಪಿ.ಉಮೇಶ್, ರಾಧಕೃಷ್ಣ, ಮುತ್ತುರಾಜ್, ಶ್ರೀನಿವಾಸ್ ತಗಡ ಆಚಾರ್, ಲಿಂಗ ಆಚಾರ್, ಅಪ್ಪಾಜಿ ಆಚಾರ್, ಬಸವರಾಜ ಆಚಾರ್ ಇತರರು ಇದ್ದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…