More

    ತುಲಾಭಾರದ ವೇಳೆ ತಲೆ ಮೇಲೆ ಬಿದ್ದ ತಕ್ಕಡಿ; ಆರಾಮಾಗಿದ್ದೇನೆ, ಆತಂಕ ಬೇಡ ಎಂದ ಪೇಜಾವರಶ್ರೀ

    ನವದೆಹಲಿ: ತುಲಾಭಾರ ಸೇವೆ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದು ಪೇಜಾವಾರಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗಾಯಗೊಂಡಿರುವ ಘಟನೆ ನಡೆದಿದೆ. ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಅಚಾತುರ್ಯ ನಡೆದಿದೆ.

    ದೆಹಲಿ ಪ್ರವಾಸದಲ್ಲಿರುವ ಫೇಜಾವರಶ್ರೀ ಅಲ್ಲಿನ ಮಠಕ್ಕೆ ಭೇಟಿ ನೀಡಿದ ವೇಳೆ ಘಟನೆ ನಡೆದಿದೆ. ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದಾರೆ.

    ಇದನ್ನೂ ಓದಿ: ಅಗ್ಗದ ದರದಲ್ಲಿ ಚಿನ್ನ ಖರೀದಿಸಲು ಹೋಗಿ ಕೋಟಿ ರೂ. ಕಳೆದುಕೊಂಡ ವ್ಯಕ್ತಿ

    ಉಡುಪಿ ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ತುಲಾಭಾರ ಮಾಡಲಾಗುತ್ತಿತ್ತು. ಆ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಸರಳು ಪೇಜಾವರ ಶ್ರೀಗಳ ತಲೆಯ ಮೇಲೆ ಕಳಚಿ ಬಿದ್ದಿದೆ. ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅನಾಹುತದಿಂದ ಪಾರಾಗಿದ್ದಾರೆ. ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತವಾಗಿದ್ದಾರೆ ಎಂದು ಮಠದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

    ಆರಾಮಾಗಿದ್ದೇನೆ ಆತಂಕ ಬೇಡ

    ಈ ಕುರಿತು ಪ್ರತಿಕ್ರಿಯಿಸಿರುವ ಪೇಜಾವಾರಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ತುಲಾಭಾರ ಕಾರ್ಯಕ್ರಮದಲ್ಲಿ ತಕ್ಕಡಿ ಹಗ್ಗ ನನ್ನ ತಲೆಯ ಮೇಲೆ ಕಳಚಿ ಬಿತ್ತು. ಅದರಿಂದಾದ ಗಾಯ ಪೂರ್ಣ ಮಾಸಿಹೋಗಿದೆ. ಗಾಯದ ಕುರುಹು ಸಹ ಇಲ್ಲದಂತೆ ವಾಸಿಯಾಗಿದೆ. ದೊಡ್ಡ ಗಾಯ ಏನೂ ಆಗಿಲ್ಲ, ನಾನು ಆರಾಮವಾಗಿದ್ದೇನೆ, ಯಾರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts