More

    ಮೊದಲ ಬಾರಿಗೆ ವಿಷನ್ ಡಾಕ್ಯುಮೆಂಟ್, ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ

    ಉಡುಪಿ: ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ವಿಪುಲ ಅವಕಾಶಗಳಿವೆ. ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಅತ್ಯುತ್ತಮ ವಾತಾವರಣ ಹೊಂದಿದೆ. ಈ ಬಗ್ಗೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿಷನ್ ಡಾಕ್ಯುಮೆಂಟ್ ತಯಾರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

    ಭಾನುವಾರ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಸ್ಕೌಟ್ಸ್ ಗೈಡ್ಸ್ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ವಿಷನ್ ಡಾಕ್ಯುಮೆಂಟ್ ಅಂತಿಮ ಹಂತದಲ್ಲಿದೆ. ಅದು ಪೂರ್ಣಗೊಂಡ ನಂತರ ಸರ್ಕಾರಕ್ಕೆ ಸಲ್ಲಿಸಿ ಜಿಲ್ಲೆಯನ್ನು ಪ್ರವಾಸೋದ್ಯಮಕ್ಕೆ ಆದ್ಯತೆ ಜಿಲ್ಲೆಯಾಗಿ ಪರಿಗಣಿಸಲಾಗುವುದು. ಈ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದು ಜಿಲ್ಲೆಯ ಪ್ರವಾಸೋದ್ಯಮವನ್ನು ಇನ್ನೂ ಉತ್ತುಂಗಕ್ಕೇರಿಸಲು ಸಾಧ್ಯ ಎಂದು ತಿಳಿಸಿದರು.

    ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸಂಪನ್ಮೂಲ ವ್ಯಕ್ತಿ ಪ್ರೊ.ಈಶ್ವರ್ ಮಾತನಾಡಿದರು.
    ನಗರಾಭಿವೃದ್ಧಿ ಅಧ್ಯಕ್ಷ ರಾಘವೇಂದ್ರ ಕಿಣಿ ಅಧ್ಯಕ್ಷತೆ ವಹಿಸಿದ್ದರು. ಮಾಸ್ಕ್‌ಗಳನ್ನು ತಯಾರಿಸಿ ಸೈನಿಕರಿಗೆ ನೀಡಿದ ಇಶಿತಾ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಜಿಪಂ ಅಧ್ಯಕ್ಷ ದಿನಕರ ಬಾಬು, ಸಿಇಒ ಪ್ರೀತಿ ಗೆಹ್ಲೋತ್ ಮೊದಲಾದವರಿದ್ದರು.

    ಬ್ಲೂ ಫ್ಲಾೃಗ್ ಬೀಚ್ ಶೀಘ್ರ ಮನ್ನಣೆ: ಪಡುಬಿದ್ರಿಯ ಎಂಡ್ ಪಾಯಿಂಟ್‌ನ ಬೀಚ್ ಬ್ಲೂ ಫ್ಲಾೃಗ್ ಬೀಚ್‌ಗೆ ಅಂತಾರಾಷ್ಟ್ರೀಯ ಮನ್ನಣೆ ಸಿಗಲು ಮಾತ್ರ ಬಾಕಿ ಇದೆ. ರಾಷ್ಟ್ರೀಯ ಎಲ್ಲ ಜ್ಯೂರಿಗಳು ಅತ್ಯುತ್ತಮವಾಗಿ ಬೆಳವಣಿಗೆಯಾಗಿರುವ ಬೀಚ್ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.

    ವಿಷನ್ ಡಾಕ್ಯುಮೆಂಟ್: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆ ದೃಷ್ಟಿಯಿಂದ ಜಿಲ್ಲಾಡಳಿತ ಟಾಸ್ಕ್‌ಫೋರ್ಸ್ ರಚಿಸಿದ್ದು, 84ಕ್ಕೂ ಅಧಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಬಗ್ಗೆ ನೀಲಿನಕ್ಷೆ ತಯಾರಿಸಲಾಗುತ್ತಿದೆ. ಬೀಚ್‌ಗಳು, ದೇವಸ್ಥಾನಗಳು, ಸ್ಮಾರಕಗಳು, ಜಲಪಾತಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ವಿಷನ್ ಡಾಕ್ಯುಮೆಂಟ್ ಸಹಾಯಕವಾಗಲಿದೆ. ಈ ಕಾರ್ಯ ಅಂತಿಮ ಹಂತದಲ್ಲಿದೆ. ಬುಕ್‌ಲೆಟ್ ರೂಪದಲ್ಲಿ ಮಾಹಿತಿ ಸಂಗ್ರಹಿಸಿ ಜಿಲ್ಲಾಡಳಿತಕ್ಕೆ ನೀಡಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts