More

    ದಾರ್ಶನಿಕರ ಸಿದ್ಧಾಂತ ಪಾಲಿಸಿ: ತಹಸೀಲ್ದಾರ್ ಗಿರೀಶ್

    ಶಿವಮೊಗ್ಗ: ಜಯಂತಿಗಳು ಕೇವಲ ಸರ್ಕಾರಿ ಆಚರಣೆಗಳಾಗಿ ಉಳಿಯಬಾರದು. ಸಮಾಜದ ಎಲ್ಲರೂ ಸೇರಿ ಜಯಂತಿ ಆಚರಿಸಬೇಕು. ಪ್ರತಿಯೊಬ್ಬರೂ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ, ಅವರ ಜೀವನದಲ್ಲಿನ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ತಹಸೀಲ್ದಾರ್ ಗಿರೀಶ್ ಹೇಳಿದರು.

    ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಸಂತ ಸೇವಾಲಾಲ್ ಜಯಂತಿ ಉದ್ಘಾಟಿಸಿ ಮಾತನಾಡಿ, ಸೇವಾಲಾಲ್ ಅವರ ಆದರ್ಶ ಮತ್ತು ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ನಿಜವಾದ ಅರ್ಥವನ್ನು ಕಲ್ಪಿಸಬೇಕಾಗಿದೆ ಎಂದರು.
    ಮಹಾನ್ ವ್ಯಕ್ತಿಗಳು ಹಾಗೂ ದಾರ್ಶನಿಕರ ಜೀವನ ಚರಿತ್ರೆ, ಅವರ ತತ್ವ ಮತ್ತು ಆದರ್ಶವನ್ನು ಪ್ರತಿಯೊಬ್ಬರು ತಿಳಿಯಬೇಕೆಂಬ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಯೋಜಿಸಿದೆ. ಇದರ ಆಶಯ ಈಡೇಬೇಕಿದೆ ಎಂದು ಹೇಳಿದರು.
    ಸಂತ ಸೇವಾಲಾಲ್ ಮಹಾಮಠದ ಗೋಶಾಲಾ ಸಮಿತಿ ಅಧ್ಯಕ್ಷ ಎಂ.ವೈ ನಾನ್ಯಾನಾಯ್ಕಾ, ಬಂಜಾರ ಸಂಘದ ಜಿಲ್ಲಾ ಉಪಾಧ್ಯಕ್ಷ ಆಯನೂರು ಶಿವನಾಯ್ಕ, ಪ್ರಧಾನ ಕಾರ್ಯದರ್ಶಿ ಬಿ.ಆರ್.ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಉಮೇಶ್, ಬಂಜಾರ ಸಮಾಜ ಮುಖಂಡ ನಾಗೇಶ್ ನಾಯ್ಕ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts