ನೆರೆಹಾನಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ

nyadheesha bheti
ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಂಜುಳಾ ಬಿ. ಭೇಟಿ ನೀಡಿದರು.
Published on

ಕುಂದಾಪುರ: ಮಳೆಹಾನಿಗೀಡಾದ ಹೊಂಬಾಡಿ ಮಂಡಾಡಿ ಗ್ರಾಪಂ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳಾ ಬಿ. ಭೇಟಿ ನೀಡಿದರು.

ಅಪಾರ ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ತಿ ಮನೆಗಳಿಗೆ ಭೇಟಿ ನೀಡಿದರು. ರಾತ್ರಿ ಪಂಚಾಯಿತಿ ನೀಡುವ ವಸತಿ ವ್ಯವಸ್ಥೆಗೆ ತೆರಳುವಂತೆ, ನೆರೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿಕೊಡುವಂತೆ ಸೂಚಿಸಿದರು.

ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯ ರಿಂಗ್ ರೋಡ್‌ನಲ್ಲಿ ನೀರು ಹರಿದು ಹೋಗಲು ಸೂಕ್ತ ಪೈಪ್ ವ್ಯವಸ್ಥೆ ಮಾಡುವಂತೆ ಆದೇಶಿಸಿದರು. ನೆರೆ ಹಾನಿ ಸಂದರ್ಭ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು, ಮಾಹಿತಿ ನೀಡುವ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳ ಜತೆ ಸಮನ್ವಯ ಸಾಧಿಸುವ ಸಲುವಾಗಿ ಭೇಟಿ ನೀಡಲಾಗಿತ್ತು.

ತಹಸೀಲ್ದಾರ್ ಶೋಭಾಲಕ್ಷ್ಮೀ, ಉಪತಹಸೀಲ್ದಾರ್ ವಿನಯ್, ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ್ ಹಂದೆ, ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ, ಕಂದಾಯ ನಿರೀಕ್ಷಕ ದಿನೇಶ್, ವಿಎ ವಿಶ್ವನಾಥ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net