ಆಸ್ಪತ್ರೆಯಲ್ಲಿ ಗಾಯಾಳುಗಳ ಭೇಟಿ, ಸಾಂತ್ವನ

ಮದ್ದೂರು: ಗುಂಪು ಘರ್ಷಣೆಯಲ್ಲಿ ಗಾಯಗೊಂಡು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಮಲತಾ ಅಂಬರೀಶ್ ಬೆಂಬಲಿಗರನ್ನು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಭೇಟಿ ಮಾಡಿ ಸಾಂತ್ವನ ಹೇಳಿದರು.

ಲೋಕಸಭಾ ಚುನಾವಣಾ ಫಲಿತಾಂಶ ಸಂಬಂಧವಾಗಿ ತಾಲೂಕಿನ ಕೂಳಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಜೆಡಿಎಸ್ ಮುಖಂಡರು ಕುಮಾರ್ ಮತ್ತು ಶಶಿಧರ್ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸೋಲು-ಗೆಲುವು ಸಹಜ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಪ್ರತಿಯೊಬ್ಬರು ಶಾಂತಿ ಕಾಪಾಡಬೇಕು. ಘರ್ಷಣೆಗಳಿಗೆ ಅವಕಾಶ ಮಾಡಿಕೊಡಬಾರದು. ಹಲ್ಲೆ ಮಾಡಿದ ವ್ಯಕ್ತಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಬೇಲೂರು ಸೋಮಶೇಖರ್ ಆಗ್ರಹಿಸಿದರು.

ಬಳಗದ ತಾಲೂಕು ಅಧ್ಯಕ್ಷ ತೊರೆಚಾಕನಹಳ್ಳಿ ಶಂಕರೇಗೌಡ, ಮುಖಂಡರಾದ ಯೋಗೇಶ್, ಸಿದ್ದರಾಜು, ಕುಮಾರ್, ಕೋಣಸಾಲೆ ಜಯರಾಮು ಸೇರಿ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *