More

    ತಿಂಗಳಿಗೊಮ್ಮೆ ಸರ್ಕಾರಿ ಕಚೇರಿಗೆಗಳಿಗೆ ಭೇಟಿ

    ತರೀಕೆರೆ: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ.ತಿರುಮಲೇಶ್ ಸೋಮವಾರ ಪಟ್ಟಣದ ಉಪ ನೋಂದಣಿ ಅಧಿಕಾರಿ ಕಚೇರಿ ಮತ್ತು ಪುರಸಭೆ ಕಾರ್ಯಾಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿದರು.
    ಉಪನೋಂದಣಿ ಅಧಿಕಾರಿ ಕಚೇರಿ ಮತ್ತು ಪುರಸಭೆ ಕಾರ್ಯಾಲಯದಲ್ಲಿ ಮಹತ್ವದ ಕಡತ ಪರಿಶೀಲಿಸಿ, ವೈಯಕ್ತಿಕ ಸಮಸ್ಯೆ ಹೊತ್ತು ಬರುವ ಸಾರ್ವಜನಿಕರಿಗೆ ಅನಗತ್ಯವಾಗಿ ಅಲೆದಾಡಿಸ ಬಾರದು. ನಿಗದಿತ ಸಮಯದಲ್ಲಿ ಕೆಲಸ ಮಾಡಿ ಜನಸ್ನೇಹಿಯಾಗಿ ವರ್ತಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಂತರ ತಾಲೂಕು ಕಚೇರಿ ಸಭಾಂಗಣದಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲು ಸ್ವೀಕರಿಸಿ ನಿರ್ಗಮಿಸಿದರು. ಲೋಕಾಯುಕ್ತ ಸಿಬ್ಬಂದಿ ಲೋಕೇಶ್, ಚಂದನ್ ಇದ್ದರು.
    ಸರ್ಕಾರಿ ಕಚೇರಿಗಳಲ್ಲಿ ಸಕಾಲದಲ್ಲಿ ಕೆಲಸ ಕಾರ್ಯವಾಗುವುದಿರಲಿ, ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗುತ್ತಿರುವ ದೂರು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರೀಕ್ಷಿತ ಭೇಟಿ ನೀಡಲಾಗಿದೆ. ಈ ರೀತಿಯ ಭೇಟಿ ತಿಂಗಳಿಗೊಮ್ಮೆ ಕಚೇರಿಯಗಳಿಗೆ ಭೇಟಿ ನೀಡಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ.ತಿರುಮಲೇಶ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts