More

    ಮಠಗಳಿಂದ ಸಂಸ್ಕೃತಿ ಅಗಾಧವಾಗಿ ಬೆಳೆದಿದೆ, ವಸತಿ ಸಚಿವ ಸೋಮಣ್ಣ ಅಭಿಮತ, ಶಿವಗಂಗೆ ಮೇಲಣಗವಿ ವೀರಸಿಂಹಾಸನ ಮಠಕ್ಕೆ ಭೇಟಿ

    ದಾಬಸ್ ಪೇಟೆ: ವೀರಶೈವ ಲಿಂಗಾಯತ ಮಠಗಳು ನಾಡಿನ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಮಾಡುತ್ತಾ ಸಮಾಜಕ್ಕೆ ಉನ್ನತ ಕೊಡುಗೆ ನೀಡುತ್ತಿವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

    ಸೋಂಪುರ ಹೋಬಳಿಯ ಶಿವಗಂಗೆ ಮೇಲಣಗವಿ ವೀರಸಿಂಹಾಸನ ಮಠಕ್ಕೆ ಭಾನುವಾರ ಭೇಟಿ ನೀಡಿ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಾತನಾಡಿದರು.

    ದೇಶದಲ್ಲಿ ಮಠ ಮಾನ್ಯಗಳಿಂದ ನಮ್ಮ ಸಂಸ್ಕೃತಿ ಅಗಾಧವಾಗಿ ಬೆಳೆದಿದೆ. ಸಮಾಜದಲ್ಲಿ ಇಂದು ಹಲವಾರು ಬದಲಾವಣೆಗಳಾಗುತ್ತಿದ್ದು, ನಾವು ಹಿಂದಿನ ಪರಂಪರೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ. ಆ ನಿಟ್ಟಿನಲ್ಲಿ ಮೇಲಣಗವಿ ಮಠದ ಸ್ವಾಮೀಜಿ ಅವರು ಉತ್ತಮ ಕೆಲಸ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.

    ಪೂಜ್ಯರು, ಅಜ್ಞಾನದಿಂದ ಸುಜ್ಞಾನದ ಕಡೆಗೆ ಭಕ್ತರನ್ನು, ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ಮಲಯ ಶಾಂತಮುನಿ ಶ್ರೀಗಳು ಮೇಲಣಗವಿ ಮಠಕ್ಕೆ ಬಂದಾಗ ಕಲ್ಲಿನ ಚಿಕ್ಕ ಮಠವಾಗಿತ್ತು, ನಂತರ ಮಠದ ನವೀಕರಣದಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದರು.

    ಮೇಲಣಗವಿ ಮಠದ ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಆಕಸ್ಮಿಕವಾಗಿ ವಸತಿ ಸಚಿವರು ಮಠಕ್ಕೆ ಆಗಮಿಸಿ ಆಶೀರ್ವಾದ ಪಡೆದಿರುವುದು ಸಂತಸದ ಸಂಗತಿ. ಸಚಿವರಾಗಿ ಅತ್ಯುತ್ತಮ ರೀತಿಯಲ್ಲಿ ಜನಪರ ಕೆಲಸ ಮಾಡುತ್ತಿದ್ದು, ಜಾತಿ, ಮತ ಧರ್ಮ ಎನ್ನದೆ ಎಲ್ಲ ಮಠಗಳಿಗೂ ಸೇವೆ ಮಾಡುತ್ತಾ ಬರುತ್ತಿರುವುದು ಸಂತಸದ ವಿಷಯ ಎಂದರು.

    ಕರೊನಾ ನಿಯಂತ್ರಣದಲ್ಲಿ ಸಲ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿಲ್ಲ. ನಮ್ಮ ನಾಯಕ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನಾಯಕತ್ವದಲ್ಲಿ ನಾವೆಲ್ಲ ನಡೆಯುತ್ತೇವೆ. ರಾಜ್ಯದಲ್ಲಿ ಕರೊನಾ ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು, ಅಧಿಕಾರಿ ವರ್ಗ ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಸೋಮಣ್ಣ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts