ನದಿ ತಟದಲ್ಲಿ ದ್ವಾದಶ ಜ್ಯೋತಿರ್ಲಿಂಗ ಪುಣ್ಯ ದರ್ಶನ

blank

ಮೈಸೂರು: ತಿರಮಕೂಡಲು ಮಹಾಕುಂಭಮೇಳದ ಅಂಗವಾಗಿ ನದಿ ತಟದ ಪ್ರಾಂಗಣದಲ್ಲಿ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಹಾಗೂ ಶಿವ ದರ್ಶನ ಪ್ರದರ್ಶನ ಆಯೋಜಿಸಲಾಗಿದೆ.
ಫೆ.10ರಂದು ಸಂಜೆ4ಕ್ಕೆ ಪುಣ್ಯದರ್ಶನಕ್ಕೆ ಚಾಲನೆ ನೀಡಲಾಗುವುದು. ದಿವ್ಯಸಾನ್ನಿಧ್ಯವನ್ನು ಶ್ರೀಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಶ್ರೀಸೋಮನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಿ.ಕೆ. ಲಕ್ಷ್ಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಭಾಮಣಿ ಸಂದೇಶ ನೀಡಲಿದ್ದಾರೆ ಎಂದು ಸಂಚಾಲಕಿ ಬಿ.ಕೆ. ಶಾಂಭವೀಜಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯೋಗಾನುಭೂತಿಯನ್ನು ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರು ಮಾಡಿಸಲಿದ್ದಾರೆ. ಹಳೇ ತಿರುಮಕೂಡಲು ಶ್ರೀಚೌಡೇಶ್ವರಿ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿರುವ ಓಂ ಶಾಂತಿ ಮಂಟಪದಲ್ಲಿ ಸಾರ್ವಜನಿಕರಿಗಾಗಿ ಬೆಳಗ್ಗೆ 7ರಿಂದ ಸಂಜೆ 9ಗಂಟೆಯವರೆಗೆ ಮೂರು ದಿನಗಳು ಉಚಿತವಾಗಿ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…