More

    ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಪಾಸ್ ಕೊಟ್ಟ ವಿಚಾರವೂ ತನಿಖೆಗೆ ಒಳಪಡಲಿದೆ: ಪ್ರಲ್ಹಾದ್ ಜೋಶಿ

    ನವದೆಹಲಿ: ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್​ ಭವನದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಉಂಟಾದ ಭದ್ರತಾ ಲೋಪ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸ್​ ಕಸ್ಟಡಿಗೆ ಕಳುಹಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದು ವಿಷಾದನೀಯ ಮತ್ತು ಖಂಡನೀಯ ಎಂದು ಹೇಳಿದ್ದಾರೆ.

    ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಂಸದ ಪ್ರತಾಪ್​ ಸಿಂಹ ಯಾವ ಆಧಾರದ ಮೇಲೆ ಪಾಸ್​ ಕೊಟ್ಟರು ಸೇರಿದಂತೆ ಎಲ್ಲವೂ ತನಿಖೆಯಾಗಲಿದೆ ಎಂದು ತಿಳಿಸಿದ್ದಾರೆ.

    ಲೋಕಸಭೆ ಅಧಿವೇಶನದ ವೇಳೆ ಭದ್ರತಾ ಲೋಪ ಆಗಿರುವುದು ವಿಷಾದನೀಯ ಹಾಗೂ ಖಂಡನೀಯ. ಮೈಸೂರಿನವರು ಎಂಬ ಕಾರಣಕ್ಕೆ ಪಾಸ್ ಕೊಟ್ಟೆ ಎಂದು ನನ್ನ ಬಳಿ ಹೇಳಿದ್ದಾರೆ. ಯಾರನ್ನು ಯಾವ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಕ್ಷೇತ್ರದ ಜನರು ಬಂದಾಗ ಪಾಸ್ ಕೊಡುವುದು ಸಹಜ. ಪಾಸ್ ಕೊಟ್ಟ ವಿಚಾರವೂ ತನಿಖೆಗೆ ಒಳಪಡಲಿದೆ.

    ಇದನ್ನೂ ಓದಿ: ವಿದಾಯದ ಸರಣಿಯಲ್ಲಿ ಸ್ಪೋಟಕ ಶತಕ ಸಿಡಿಸಿದ ವಾರ್ನರ್; ಮೊದಲ ಟೆಸ್ಟ್​ನಲ್ಲಿ ಪಾಕ್​ ವಿರುದ್ಧ ಮೇಲುಗೈ ಸಾಧಿಸಿದ ಆಸೀಸ್

    ಪ್ರತಾಪ್​ ಸಿಂಹ ಅವರನ್ನು ಅಮಾನತು ಮಾಡಬೇಕೆಂಬ ಕಾಂಗ್ರೆಸ್​ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದನ್ನು ಮಹುವಾ ಮೊಯಿತ್ರಾ ಪ್ರಕರಣಕ್ಕೆ ಹೋಲಿಸಬೇಡಿ. ಇದು ಬೇರೆ ರೀತಿಯ ಪ್ರಕರಣ. ಜನಪ್ರತಿನಿಧಿಯಾಗಿ ಅವರು ಒಳ್ಳೆ ಉದ್ದೇಶದಿಂದ ಪಾಸ್ ಕೊಟ್ಟಿರುತ್ತಾರೆ. ಬೇರೆ ಉದ್ದೇಶಕ್ಕೆ ಬಳಕೆಯಾಗಿದೆ. ಎರಡನ್ನೂ ಹೋಲಿಸುವುದು ತಪ್ಪು. ಮಹುವಾ ಮೊಯಿತ್ರಾ ಪರವಾಗಿ ಬೇರೆಯವರು ಲಾಗಿನ್ ಮಾಡಿ ಪ್ರಶ್ನೆ ಕೇಳುತ್ತಾರೆ. ಇದನ್ನು ತನಿಖೆ ಮಾಡಿ ಅವರನ್ನು ಅಮಾನತು ಮಾಡಲಾಗಿದೆ.

    ಘಟನೆಯ ಬಳಿಕ ಲೋಕಸಭೆ ಸ್ಪೀಕರ್ ಸಭಾ ನಾಯಕರ ಸಭೆ ನಡೆಸಿದರು. ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದರು. ಘಟನೆಯಿಂದ ಪಾಠ ಕಲಿತು ಮುಂದೆ ತೆಗೆದುಕೊಳ್ಳುವ ಕ್ರಮ ಬಗ್ಗೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಸಲಹೆ ಪಡೆದು ಸಂಸತ್ ಸುರಕ್ಷೆ ಮಾಡುವುದು ನಮ್ಮ ಉದ್ದೇಶ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts