More

    ವಿಐಎಸ್‌ಎಲ್ ಗುತ್ತಿಗೆ ನೌಕರ ಸಾವು: 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಕಾರ್ಖಾನೆ ಮುಂದೆ ಪ್ರತಿಭಟನೆ

    ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್‌ನಲ್ಲಿ ಕರ್ತವ್ಯನಿತರ ಗುತ್ತಿಗೆ ಕಾರ್ಮಿಕನೊಬ್ಬ ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದು, 25 ಲಕ್ಷ ರೂ. ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡುವಂತೆ ಒತ್ತಾಯಿಸಿ ಕಾರ್ಮಿಕರು ಕಾರ್ಖಾನೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
    ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಅಂಥೋಣಿ ರಾಜ್(47) ಮೃತರು. ಕಾರ್ಖಾನೆ ನಿಯಮಾವಳಿ ಪ್ರಕಾರ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಅಪಘಾತ ಅಥವಾ ಅವಘಡಗಳು ಸಂಭವಿಸಿದರೆ ಕುಟುಂಬದವರಿಗೆ ಪರಿಹಾರ ನೀಡಬೇಕಿದೆ. ಆದರೆ ಅಂಥೋಣಿ ಹೃದಯಾಘಾತದಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕಾರ್ಖಾನೆ ಆಡಳಿತ ಮಂಡಳಿ ತಿಳಿಸಿದೆ ಎನ್ನಲಾಗಿದೆ.
    ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕಾರ್ಮಿಕರು ಅಂಥೋಣಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ವಿಚಾರದ ಕುರಿತಾಗಿ ಮೃತರ ಕುಟುಂಬಸ್ಥರು, ನೌಕರರು, ಕಾರ್ಮಿಕರು ಹಾಗೂ ಕಾರ್ಖಾನೆ ಅಧಿಕಾರಿಗಳ ನಡುವೆ ವಾಗ್ವಾದ, ಮಾತುಕತೆಗಳು ನಡೆಯುತ್ತಿದೆ. ಶಾಸಕ ಬಿ.ಕೆ.ಸಂಗಮೇಶ್ವರ್‌ಸ್ಥಳಕ್ಕೆ ಭೇಟಿ ನೀಡಿ, ಸಂಧಾನ ಮಾತುಕತೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts