

ಶಿರ್ವ: ಸರ್.ಎಮ್.ವಿಶ್ವೇಶ್ವರಯ್ಯ ನಮ್ಮ ದೇಶಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸೃಜನಶೀಲತೆ, ಜೀವನ ಕೌಶಲ್ಯ ಮತ್ತು ಪಠ್ಯ ಪುಸ್ತಕಗಳನ್ನು ಮೀರಿದ ವಿಶಾಲ ದೃಷ್ಟಿಕೋನ ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರು ಮೈಕ್ರೋಸಾಫ್ಟ್‌ನ ಪ್ರಧಾನ ಸಾಫ್ಟ್‌ವೇರ್ ಇಂಜಿನಿಯರ್ ಗುರುಚರಣ್ ಬುಲುಸು ಹೇಳಿದರು.
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಎಸ್‌ಟಿಇ ಸಹಯೋಗದೊಂದಿಗೆ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಇಂಜಿನಿಯರ್ಸ್ ದಿನಾಚರಣೆ ಉದ್ಘಾಟಿಸಿ ವಾತನಾಡಿದರು.
ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ವಾತನಾಡಿ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಕಲಿಕೆಯತ್ತ ಹೆಚ್ಚು ಗಮನ ಹರಿಸಬೇಕು. ಕಂಠಪಾಠ ವಾಡುವ ಕಲಿಕೆಗಿಂತ ಆಳವಾದ ಅಧ್ಯಯನದ ಮಹತ್ವದ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಸಂಸ್ಥೆ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಾತನಾಡಿದರು. ಉಪನ್ಯಾಸಕರು, ಸಂಸ್ಥೆಯ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.