ವಿಟ್ಲ: 13ರ ಹರೆಯದ ಬಾಲಕಿಯೊಬ್ಬಳು ತನ್ನ ಸಹೋದರನಿಂದಲೇ ನಿರಂತರ ಅತ್ಯಾಚಾರಕ್ಕೊಳಗಾಗಿ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆರುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲು ತೆರಳಿದ ಸಂದರ್ಭ ಓರ್ವ ಬಾಲಕಿ ಸಹಜವಾಗಿಲ್ಲದಿರುವುದು ಕಂಡು ಬಂದಿತ್ತು. ಅನುಮಾನಗೊಂಡ ಅವರು ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ಸೂಚಿಸಿದ್ದರು. ಅದರಂತೆ ತಪಾಸಣೆ ನಡೆಸಿದಾಗ ಆಕೆ 4 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಲಕಿಯನ್ನು ವಿಚಾರಣೆ ನಡೆಸಿದಾಗ ಆಕೆಯ ಸಹೋದರನಿಂದಲೇ ವರ್ಷದಿಂದ ನಿರಂತರ ಅತ್ಯಾಚಾರಕ್ಕೊಳಗಾಗುತ್ತಿರುವುದಾಗಿ ತಿಳಿಸಿದ್ದಾಳೆ. ಆಕೆ ಸಹೋದರ 17 ವರ್ಷದ ಬಾಲಕನನ್ನು ವಶಕ್ಕೆ ಪಡೆದು ಬಾಲ ನ್ಯಾಯಮಂಡಳಿಯ ಪಾಲನಾ ಕೇಂದ್ರಕ್ಕೆ ಕಳುಹಿಸಲಾಗಿದೆ.