More

    9 ವರ್ಷಗಳ ಬಳಿಕ ನಕ್ಸಲ್​ ನಂಟು ಆರೋಪದಿಂದ ಮುಕ್ತರಾದ್ರು ವಿಠಲ ಮಲೆಕುಡಿಯ ಮತ್ತು ತಂದೆ; ಆರೋಪಮುಕ್ತಗೊಳಿಸಿದ ನ್ಯಾಯಾಲಯ

    ಮಂಗಳೂರು: ನಕ್ಸಲ್​ ನಂಟು ಆರೋಪಕ್ಕೆ ಒಳಗಾಗಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಇಬ್ಬರೂ ಇದೀಗ ಆ ಆರೋಪದಿಂದ ಮುಕ್ತರಾಗಿದ್ದಾರೆ. ಅವರನ್ನು ಆರೋಪಮುಕ್ತಗೊಳಿಸಿ ಮಂಗಳೂರಿನ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

    ಒಂಬತ್ತು ವರ್ಷಗಳಿಂದ ನಕ್ಸಲ್​ ನಂಟು ಆರೋಪ ಎದುರಿಸುತ್ತಿದ್ದ ಇಬ್ಬರೂ ಈ ಮೂಲಕ ಅದರಿಂದ ಪಾರಾದಂತಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ, ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದ ಈ ಆರೋಪಕ್ಕೆ ಒಳಗಾಗಿದ್ದರು. 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯವರು ವಿಠಲ ಮಲೆಕುಡಿಯ ಮತ್ತು ಅವರ ತಂದೆಯನ್ನು ಬಂಧಿಸಿದ್ದರು.

    ಇದನ್ನೂ ಓದಿ: ಇಬ್ಬರು ನಕ್ಸಲರ ಪತ್ತೆ ಹಚ್ಚಿದವರಿಗೆ ಸಿಗುತ್ತೆ 10 ಲಕ್ಷ ರೂ. ಬಹುಮಾನ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸುವುದರ ವಿರುದ್ದ ಹೋರಾಟ ನಡೆಸುತ್ತಿದ್ದ ವಿಠಲ ಮಲೆಕುಡಿಯ ಅವರ ಮನೆ ಮೇಲೆ ದಾಳಿ ನಡೆಸಿದ್ದಾಗ ಚುನಾವಣೆ ಬಹಿಷ್ಕಾರದ ಕರಪತ್ರ, ಭಗತ್ ಸಿಂಗ್ ಪುಸ್ತಕ, ನಕ್ಸಲ್ ಬರಹದ ಪತ್ರಿಕಾ ತುಣುಕುಗಳು ಪತ್ತೆಯಾಗಿದ್ದವು. ಹೀಗಾಗಿ ಅವರಿಗೆ ನಕ್ಸಲ್ ನಂಟಿದೆ ಎಂದು ಬಂಧಿಸಿ ನಕ್ಸಲ್​ ನಿಗ್ರಹ ಪಡೆಯವರು ವೇಣೂರು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ವಿಠಲ ಆರನೇ ಹಾಗೂ ತಂದೆ ಲಿಂಗಣ್ಣ ಮಲೆಕುಡಿಯ ಏಳನೇ ಆರೋಪಿಗಳೆಂದು ದಾಖಲಿಸಲಾಗಿತ್ತು.

    ಇದನ್ನೂ ಓದಿ: ಗಾಂಜಾ ವ್ಯಸನಿಗಳ ವಿರುದ್ಧ ಪೊಲೀಸರಿಗೆ ಮಾಹಿತಿ‌ ನೀಡಿದ್ದ ಕರಾಟೆ ಮಾಸ್ಟರ್‌ಗೇ ಚೂರಿ ಇರಿತ

    ಈ ಪ್ರಕರಣ ದೇಶಾದ್ಯಂತ ಗಮನ ಸೆಳೆದಿದ್ದಲ್ಲದೆ ಭಾರಿ ಚರ್ಚೆ ಹುಟ್ಟು ಹಾಕಿತ್ತು. ವಿಠಲರ ಬಂಧನವಾದಾಗ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಸೇರಿ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ನಾಯಕರು ಮಂಗಳೂರು ಜೈಲಿಗೆ ಭೇಟಿ ನೀಡಿದ್ದರು. ಇಡೀ ದೇಶದಲ್ಲೇ ಭಾರಿ ಸಂಚಲನ ಸೃಷ್ಟಿಸಿದ್ದ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟಗೊಂಡಿದೆ.

    ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ; ಕಾರು ಅಡ್ಡಗಟ್ಟಿ ರಾಡ್​ನಿಂದ ಥಳಿಸಿದ ದುಷ್ಕರ್ಮಿಗಳು..

    ಕರ್ತವ್ಯದಲ್ಲಿರುವಾಗ, ಸಮವಸ್ತ್ರ ಧರಿಸಿಕೊಂಡೇ ಪೊಲೀಸರ ಡ್ರಿಂಕ್ಸ್​ ಪಾರ್ಟಿ; ಬಾರ್​ವೊಂದರ ಕೊಠಡಿಯಲ್ಲಿ ಕುಡಿಯುತ್ತಿದ್ದ ವಿಡಿಯೋ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts