ಬೆಂಗಳೂರಿನ ವಿವೇಕಾನಂದ ಶಾಲೆಯಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

New Project
Published on

ಬೆಂಗಳೂರು: ವಿಜಯನಗರದ ವಿವೇಕಾನಂದ ವಿದ್ಯಾ ಸಂಸ್ಥೆಯು ಕನ್ನಡ ಮಾಧ್ಯಮದಲ್ಲಿ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳವರು ಆನ್‌ಲೈನ್ ಅಥವಾ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೂ ಆಸಕ್ತಿಯುಳ್ಳ ಬಡ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲೂ ಸಂಸ್ಥೆಯು ಶಿಕ್ಷಣವನ್ನು ಅತಿ ಕಡಿಮೆ ಶುಲ್ಕದಲ್ಲಿ ಒದಗಿಸಲಿದೆ.

5 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು ಸಂಪರ್ಕಿಸಬೇಕಾದ ವಿಳಾಸ : ವಿಜಯನಗರ ವಿವೇಕಾನಂದ ವಿದ್ಯಾಸಂಸ್ಥೆ, ನಂ.2008, 1ನೇ ಎ ಮುಖ್ಯರಸ್ತೆ, ಎಂ.ಸಿ.ಲೇಔಟ್, ವಿಜಯನಗರ, ಬೆಂಗಳೂರು -40. ದೂ : 080-23405860, 9686265860. ವೆಬ್‌ಸೈಟ್ ವಿಳಾಸ : www.vves.org

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net