ಹಾನಗಲ್ಲ: ಯಲ್ಲಾಪುರದ ಖ್ಯಾತ ಗಾಯಕಿ ವಾಣಿ ಹರ್ಡಿಕರ ಹಾಗೂ ವಿಭಾವರಿ ಹೆಗಡೆ ಅವರಿಂದ ಸ್ವರ ಸಂಗೀತ ಕಾರ್ಯಕ್ರಮ ಅ. 15ರಂದು ಪಟ್ಟಣದ ಶಂಕರಮಠದಲ್ಲಿ ನಡೆಯಲಿದೆ. ಪಟ್ಟಣದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ತಾಲೂಕು ಘಟಕ, ಯಾಜ್ಞವಲ್ಕ್ಯ ಸೇವಾ ಸಮಿತಿ, ಮಂಥನ ವೇದಿಕೆ ಸಂಯುಕ್ತವಾಗಿ ಭಾನುವಾರ ಸಂಜೆ 5 ಗಂಟೆಗೆ ಸ್ವರ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾಜ್ಞವಲ್ಕ್ಯ ಸೇವಾ ಸಮಿತಿ ಅಧ್ಯಕ್ಷ ಆರ್.ಸಿ. ದೇಸಾಯಿ ಅಧ್ಯಕ್ಷತೆ ವಹಿಸುವರು. ತಾಲೂಕು ತಹಸೀಲ್ದಾರ್ ರವಿಕುಮಾರ ಕೊರವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹುಬ್ಬಳ್ಳಿಯ ಸಿಪಿಐ ಸುರೇಶ ಯಳ್ಳೂರ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಂಟಿ ಕಾರ್ಯದರ್ಶಿ ವಿಜಯ ನಾಡಜೋಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಇದಕ್ಕೂ ಮೊದಲು ಸಂಜೆ 4 ಗಂಟೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ತಾಲೂಕು ಘಟಕದ ವತಿಯಿಂದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬ್ರಾಹ್ಮಣ ಮಹಾಸಭಾ ತಾಲೂಕು ಅಧ್ಯಕ್ಷ ಟಿ.ಆರ್. ವೇದಂಭಟ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.