More

    ಏ.18,19ರಂದು ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಪರೀಕ್ಷೆ: 3.49 ಲಕ್ಷ ವಿದ್ಯಾರ್ಥಿಗಳ ನೋಂದಣಿ, ಡ್ರೆಸ್‌ಕೋಡ್ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

    ಬೆಂಗಳೂರು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಶ.19 ಮತ್ತು 19ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯಲಿದೆ. ಒಟ್ಟು ಬೆಂಗಳೂರಿನ 167 ಸೇರಿ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 3,49,637 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

    ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 648 ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.

    ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದಕ್ಕೆ ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಿಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

    20ರಂದು ಹೊರನಾಡು ಕನ್ನಡಿಗರಿಗೆ ಪರೀಕ್ಷೆ

    ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಿಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ವಿವರಿಸಿದರು.

    ಪರೀಕ್ಷಾರ್ಥಿಗಳಿಗೆ ಸೂಚನೆಗಳು

    – ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ. ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಮಾತ್ರ ಬಳಸತಕ್ಕದ್ದು, ತುಂಬುದೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ
    – ಮೊಬೈಲ್, ಬ್ಲೂಟೂತ್, ಟ್ಯಾಬ್ಲೆಟ್, ಕೈಗಡಿಯಾರ, ಕ್ಯಾಲುಕುಲೇಟರ್, ನೋಟ್ ಪ್ಯಾಡ್, ಐ-ಪಾಡ್, ಇಯರ್ ಫೋನ್ ಇತ್ಯಾದಿಗಳನ್ನು ತರುವಂತಿಲ್ಲ.
    – ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ. ಓಎಂಆರ್ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್ ಕೋಡ್ ನಮೂದಿಸುವುದು ಕಡ್ಡಾಯ.
    – ಓಎಂಆರ್ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು. ಓಎಂಆರ್ ಶೀಟ್‌ನಲ್ಲಿರುವ ಟೈಮಿಂಗ್ ಮಾರ್ಕ್ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.

    ವಸ ಸಂಹಿತೆ ಬಗ್ಗೆ ಸ್ಪಷ್ಟನೆ ನೀಡದ ಕೆಇಎ

    ಸಿಇಟಿ ಪರೀಕ್ಷೆಗೆ ಸರಲವಾದ ಉಡುಗೆಗಳನ್ನು ಮಾತ್ರ ತೊಡಬೇಕು ಎಂಬ ನಿರ್ದೇಶನ ನೀಡಿದೆ. ಆಭರಣಗಳು, ಶೂಗಳನ್ನು ತೊಡಬಾರದು ಎಂದು ಹೇಳಿದೆ. ಆದರೆ, ಧಾರ್ಮಿಕ ಉಡುಗೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟತೆ ನೀಡಿಲ್ಲ. ಈ ಸಂಬಂಧ ಅಧಿಕಾರಿಗಳನ್ನು ಪ್ರಶ್ನಿಸಿದರೂ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts