More

    ವಿದ್ಯಾರ್ಥಿಗಳಿಗೆ ವೃತ್ತಿಪರ ಶೈಕ್ಷಣಿಕ ಕಾರ್ಯಕ್ರಮ

    ಮಡಿಕೇರಿ: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ೧೦ನೇ ತರಗತಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿಪರ ಶೈಕ್ಷಣಿಕ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.


    ಪುತ್ತೂರಿನ ನಿವೃತ್ತ ಪ್ರಾಂಶುಪಾಲ ಸೂರ್ಯನಾರಾಯಣ ರಾವ್ ಮುಖ್ಯ ತರಬೇತುದಾರರಾಗಿ ಪಾಲ್ಗೊಂಡು ಮಾತನಾಡಿ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತೇರ್ಗಡೆಯಾದ ನಂತರ ಅವರವರ ಅಭಿರುಚಿಗೆ ತಕ್ಕಂತೆ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿದರೆ ಉತ್ತಮ ಮತ್ತು ಉದ್ಯೋಗವನ್ನು ಪಡೆಯಬಹುದು ಎಂದು ವಿವರಿಸಿದರು.


    ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸಹಕಾರಿಯಾಗಲೆಂದು ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ವಿವರಿಸಿದರು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಶಶಿಕಲಾ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಿದಾನಂದ ಮಾತನಾಡಿದರು.


    ೧೦ನೇ ತರಗತಿಯ ೮೦ ಮತ್ತು ಪಿಯುಸಿಯ ೨೫೦ ವಿದ್ಯಾರ್ಥಿಗಳು ವೃತ್ತಿಪರ ಶೈಕ್ಷಣಿಕ ಕಾರ್ಯಕ್ರಮದ ಮಾಹಿತಿ ಪಡೆದರು. ಸಂಘದ ಉಪಾಧ್ಯಕ್ಷ ಕುದುಪಜೆ ಬೋಜಪ್ಪ, ಕಾರ್ಯದರ್ಶಿ ಬಾರಿಕೆ ಅಯ್ಯಪ್ಪ, ಖಜಾಂಚಿ ಕರ್ಣಯನ ನಾಗೇಶ್, ನಿರ್ದೇಶಕರುಗಳಾದ ಬೈತಡ್ಕ ಬೆಳ್ಯಪ್ಪ, ತಳೂರು ಕಾಳಪ್ಪ ಹಾಗೂ ಕುಲ್ಲಚೆಟ್ಟಿ ಎಂ.ಪೂವಯ್ಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts