More

    ಒಕ್ಕಲಿಗ ಅಭಿವೃದ್ಧಿ ನಿಗಮ ಕಾರ್ಯಾರಂಭ; ಗಂಗಾಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ

    ಬೆಂಗಳೂರು: ಒಕ್ಕಲಿಗ ಸಮುದಾಯ ಅಭಿವೃದ್ಧಿಗೆ ರಚನೆಯಾಗಿರುವ ‘ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ’ ಸೋಮವಾರದಿಂದ (ಜು.18) ಕಾರ್ಯಾರಂಭ ಮಾಡಿದೆ. ಕಾರ್ಪೋರೇಷನ್‌ನಲ್ಲಿರುವ ಯೂನಿಟಿ ಬಿಲ್ಡಿಂಗ್ ಸಿಲ್ವರ್ ಜ್ಯೂಬಿಲಿ ಬ್ಲಾಕ್‌ನಲ್ಲಿ ಹೊಸದಾಗಿ ತೆರೆದಿರುವ ಕೇಂದ್ರ ಕಚೇರಿಗೆ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ ಚಾಲನೆ ನೀಡಿದರು.

    ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಒಕ್ಕಲಿಗ ಸಮುದಾಯಕ್ಕೆ ಸಿಗುತ್ತಿದ್ದ ಎಲ್ಲ ಯೋಜನೆಗಳ ಸೌಲಭ್ಯಗಳು ಇಲ್ಲಿ ಸಿಗಲಿವೆ. ಗಂಗಾ ಕಲ್ಯಾಣ, ಅರಿವು ಮತ್ತು ಕಿರುಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಬಡ್ಡಿರಹಿತ ಸಾಲ ಸೌಲಭ್ಯ ಸೇರಿ ಹಲವು ಯೋಜನೆಗಳು ಸಮುದಾಯದ ಫಲಾನುಭವಿಗಳಿಗೆ ಸಿಗುವ ಜತೆಗೆ ಕರಕುಶಲ ಸೌಲಭ್ಯ, ಟೆಂಪೊ ಅಥವಾ ಲಗೇಜ್ ಆಟೋಗಳಿಗೆ ಸಾಲ, ಕೌಶಲ ತರಬೇತಿ ಮತ್ತು ಹೆಣ್ಣು ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಸೇರಿ ಸಮುದಾಯದವರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಲಾಗಿದೆ.

    ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಬೆಂಗಳೂರಲ್ಲಿ ಮತ ಚಲಾವಣೆ ಮುಕ್ತಾಯ, ವಿಮಾನದಲ್ಲಿ ದೆಹಲಿಗೆ ತಲುಪಲಿದೆ ಮತಪೆಟ್ಟಿಗೆ..

    ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ 2021ರ ಜುಲೈನಲ್ಲಿ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಘೋಷಿಸಿದ್ದರು. ನಿಗಮದ ಮೊದಲ ಅಧ್ಯಕ್ಷರಾಗಿ ಶಾಸಕ ಎಂ.ಕೃಷ್ಣಪ್ಪ ಅವರನ್ನು ನೇಮಕ ಮಾಡಿರುವ ಜತೆಗೆ 500 ಕೋಟಿ ರೂ.ಅನುದಾನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಅದರಂತೆ, ಸರ್ಕಾರ ಈಗಾಗಲೇ ನಿಗಮಕ್ಕೆ 150 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

    ಗಂಗಾಕಲ್ಯಾಣ ಯೋಜನೆ: ಈ ಯೋಜನೆಯ ಪ್ರಯೋಜನ ಪಡೆಯಲು ಆಸಕ್ತರು https://kvcdc.karnataka.gov.in/kn ನಲ್ಲಿ ಅರ್ಜಿ ಸಲ್ಲಿಸಲು ನಿಗಮ ಅವಕಾಶ ನೀಡಿದೆ.

    ಒಕ್ಕಲಿಗ ಅಭಿವೃದ್ಧಿ ನಿಗಮ ಕಾರ್ಯಾರಂಭ; ಗಂಗಾಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ

    ಮೇಘಸ್ಫೋಟದ ಹಿಂದೆ ವಿದೇಶಿ ಕೈವಾಡ!; ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts