ಗಂಗಾವತಿ: ಕಲಬುರಗಿಯಲ್ಲಿ ಆಯೋಜಿಸಿದ್ದ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಕಂಚಿನ ಪದಕ ಪಡೆದುಕೊಂಡಿದ್ದಾರೆ.
19 ವರ್ಷದೊಳಗಿನ ಮತ್ತು 17 ವರ್ಷದೊಳಗಿನ ಬಾಲಕಿಯರ ವಾಲಿಬಾಲ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು, ಎಲ್ಲ ವಿಭಾಗದಲ್ಲಿ ಶ್ರೇಷ್ಠತೆ ಸಾಧಿಸಿದರು.
ಈ ಬಗ್ಗೆ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ ಮಾತನಾಡಿ, ಪಠ್ಯದೊಂದಿಗೆ, ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಉತ್ತಮ ಸಾಧನೆಯೊಂದಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪ್ರತಿನಿಧಿಸುವಂತೆ ಸಲಹೆ ನೀಡಿದರು.