ವಾಲಿಬಾಲ್, ಥ್ರೋಬಾಲ್ ಪಂದ್ಯಾಟ

gan (5)
Published on

ಕುಂದಾಪುರ: ವಂಡ್ಸೆ ಹೋಬಳಿ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾಟ ವಂಡ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾರಥ್ಯದಲ್ಲಿ ಮಂಗಳವಾರ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್ ಪಂದ್ಯಾವಳಿಗೆ ಚಾಲನೆ ನೀಡಿದರು. ಶ್ರೀ ಮೂಕಾಂಬಿಕ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ್‌ಕುಮಾರ್ ಶೆಟ್ಟಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಎಸ್‌ಡಿಎಂಸಿ ಸದಸ್ಯರಾದ ಶ್ರೀಧರ್, ಸತೀಶ್, ವಂಡ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಶೈಲಜಾ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ, ಸರ್ಕಾರಿ ನೌಕರ ಸಂಘದ ಪ್ರತಿನಿಧಿ ಪ್ರತಾಪ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಶಿಕ್ಷಕ ಸೋಮರಾಯ ಜನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ನಿರೂಪಿಸಿದರು. ಸಹಶಿಕ್ಷಕ ಸದಾಶಿವ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net