ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಸೌಹಾರ್ದ : ಸಂತೋಷ್ ಕುಮಾರ್ ಅಭಿಪ್ರಾಯ

07
Published on

ಬಂಟ್ವಾಳ: ಕ್ರೀಡೆಗಳು ಕ್ರೀಡಾ ಮನೋಭಾವನೆ ಬೆಳೆಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದ ಬೆಳೆಸಲು ಸಹಕಾರಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಶಂಭೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಶಂಭೂರು ಶಾಲೆಯಲ್ಲಿ ಬುಧವಾರ ಕಲ್ಲಡ್ಕ ವಲಯಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ರಾಜೇಶ್ ಶಾಂತಿಲ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಇಂದು ಶೇಖರ, ಕ್ರೀಡಾಕೂಟದ ನೋಡಲ್ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ಬಾಳ್ತಿಲ, ಗೋಳ್ತಮಜಲು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ಕಲ್ಲಡ್ಕ, ಉದ್ಯಮಿ ಯೋಗಿತಾ ಹೇಮಚಂದ್ರ, ಬೊಂಡಾಲ ಜಗನ್ನಾಥ ಸ್ಮಾರಕ ಪ್ರೌಢಶಾಲೆ ಮುಖ್ಯ ಶಿಕ್ಷಕ ಕಮಲಾಕ್ಷ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಜಯರಾಮ ಪಡ್ರೆ ಸ್ವಾಗತಿಸಿದರು. ಶಿಕ್ಷಕಿ ಚಿತ್ರಾ ವಂದಿಸಿದರು. ಶಿಕ್ಷಕಿ ಜಯಂತಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ಕೆ. ಸಹಕರಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಸಿಆರ್‌ಪಿಗಳಾದ ಪ್ರೇಮಲತಾ, ಸುಧಾಕರ ಭಟ್ ಮಾರ್ಗದರ್ಶನ ಮಾಡಿದರು.

ಸ್ಪರ್ಧಾ ಫಲಿತಾಂಶ

ಬಾಲಕಿಯರ ವಿಭಾಗದಲ್ಲಿ ಸ.ಉ.ಹಿ.ಪ್ರಾ ಶಾಲೆ ಮಾಣಿ ಪ್ರಥಮ ಹಾಗೂ ಸ.ಹಿ.ಪ್ರಾ.ಶಾಲೆ ಶಂಭೂರು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ವಿಭಾಗದಲ್ಲಿ ಸ.ಹಿ.ಪ್ರಾ.ಶಾಲೆ ಅನಂತಾಡಿ ಪ್ರಥಮ ಹಾಗೂ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ ದ್ವಿತೀಯ ಸ್ಥಾನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net