ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟ

volleybal
Published on

ಕೊಕ್ಕಡ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ವತಿಯಿಂದ ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೋಮವಾರ ಆರಂಭಗೊಂಡಿತು.

ಪಟ್ರಮೆ ಗ್ರಾಪಂ ಅಧ್ಯಕ್ಷ ಮನೋಜ್ ಅಂಗಾರಗುಡ್ಡೆ ಉದ್ಘಾಟಿಸಿದರು. ಕೊಕ್ಕಡ ವಲಯದ ಸಿಆರ್‌ಪಿ ವಿಲ್ಫ್ರೆಡ್ ಪಿಂಟೋ ಮುಖ್ಯ ಅತಿಥಿಯಾಗಿದ್ದರು. ಪಟ್ಟೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರವಿಚಂದ್ರ ಪುಡ್ಕೆತ್ತೂರು ಅಧ್ಯಕ್ಷತೆ ವಹಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿರಾಜ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಧರ್ಣಪ್ಪ ಗೌಡ ಮೊಟ್ಟಿಕಲ್ಲು, ಗ್ರಾಪಂ ಸದಸ್ಯ ರಾಜೇಶ್ ರೈ ಪರಾರ್ತಿಮಾರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಜಯ ಉಪಸ್ಥಿತರಿದ್ದರು.

ನೇಲ್ಯಡ್ಕ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ್ ಕೆ. ಕ್ರೀಡಾಂಗಣ ಉದ್ಘಾಟಿಸಿದರು. ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ಸ್ವಾಗತಿಸಿದರು. ಮುಖ್ಯಶಿಕ್ಷಕ ಚಂದ್ರಶೇಖರ ಶೇಟ್ ವಂದಿಸಿದರು. ಸಹಶಿಕ್ಷಕಿ ಶ್ವೇತಕುಮಾರಿ ಎಂ.ಪಿ ನಿರೂಪಿಸಿದರು.

ಮಾತೃಭಾರತಿ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಸಹಕರಿಸಿದರು. ಅಡುಗೆ ಸಹಾಯಕಿ ಪುಷ್ಪಾ ಅವರನ್ನು ಸನ್ಮಾನಿಸಲಾಯಿತು. ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ 14 ತಂಡ ಹಾಗೂ ಬಾಲಕಿಯರ 7 ತಂಡ ಸ್ಪರ್ಧೆಯಲ್ಲಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net