More

    ಪರಿಸರ ಸ್ವಚ್ಛತೆಯಲ್ಲಿ ಸ್ವಯಂಪ್ರೇರಿತರಾಗಿ ತೊಡಗಿಸಿಕೊಳ್ಳಿ

    ಆಲೂರು: ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಪ್ರತಿಯೊಬ್ಬರೂ ಸ್ವ-ಪ್ರೇರಣೆಯಿಂದ ತೊಡಗಿಸಿಕೊಳ್ಳಬೇಕು ಎಂದು ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಟಿ.ಪಿ.ಪುಟ್ಟರಾಜು ಹೇಳಿದರು.

    ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಹಳ್ಳಿ-ಹಬ್ಬ ಎಂಬ ಪರಿಕಲ್ಪನೆಯಡಿ ಕಸ-ರಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸುವ ಜತೆಗೆ ನಿರುಪಯುಕ್ತವೆಂದು ಎಸೆಯುವ ವಸ್ತುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಬಗ್ಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮ ಆಯೋಜಿಸುವುದು ಅತ್ಯವಶ್ಯಕವಾಗಿದೆ. ಸಮಾಜದಲ್ಲಿ ತ್ಯಾಜ್ಯ ನಿರ್ವಹಣೆ ದೊಡ್ಡ ಸಮಸ್ಯೆಯಾಗಿದೆ. ಘನತ್ಯಾಜ್ಯವನ್ನು ಸುಡುವುದು ಹಾಗೂ ಹೂಳುವುದು ಎರಡೂ ಅವೈಜ್ಞಾನಿಕವಾಗಿದ್ದು, ಇದರಿಂದ ಭೂಮಿ, ನೀರು ಮತ್ತು ಗಾಳಿಯನ್ನು ಕಲುಷಿತಗೊಳಿಸಲಾಗುತ್ತಿದೆ. ಬಿಸಾಡುವ ಕಸಗಳನ್ನು ಬಳಸಿ ಅದ್ಭುತ ಕಲಾಕೃತಿಗಳನ್ನು ರಚಿಸುವುದು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು. ಉಪನ್ಯಾಸಕ ಡಾ.ಕೆ.ಎಸ್.ಮೋಹನ್ ಕುಮಾರ್ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಸಂಚಾಲಕ ಎಚ್. ಜಿ. ಶಿವಪ್ರಸಾದ್, ಪುರುಷೋತ್ತಮ್, ಆರ್.ವಿ. ಮನು, ಕಚೇರಿ ಅಧೀಕ್ಷಕ ರವಿಪ್ರಕಾಶ್, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts