18.5 C
Bangalore
Monday, December 16, 2019

ಬಂಕಾಪುರದಲ್ಲಿ ವಾಂತಿ-ಭೇದಿ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಬಂಕಾಪುರ: ಪಟ್ಟಣದ ವಾಂತಿ-ಭೇದಿ ಉಲ್ಬಣಗೊಂಡಿದ್ದು, 40ಕ್ಕೂ ಹೆಚ್ಚು ಜನರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೋಮವಾರ ದಾಖಲಾಗಿದ್ದಾರೆ.

ಕಳೆದ ಎಂಟತ್ತು ದಿನಗಳಿಂದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಇದೀಗ ಉಲ್ಬಣಗೊಂಡಿದ್ದು, ಕಲುಷಿತ ನೀರು ಸೇವನೆಯೇ ಕಾರಣ ಎನ್ನಲಾಗುತ್ತಿದೆ. ಪಟ್ಟಣಕ್ಕೆ ನೀರು ಪೂರೈಸುವ ಸಂಪುಗಳನ್ನು ಸ್ವಚ್ಭಗೊಳಿಸದಿರುವುದು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಕೊರತೆಯಿಂದ ಸಮಸ್ಯೆ ಕಾಣಿಸಿಕೊಂಡಿದೆ ಎಂಬ ದೂರುಗಳಿವೆ.

ಕಳೆದೊಂದು ವಾರದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ನೂರಕ್ಕೂ ಅಧಿಕ ಜನರು ವಾಂತಿ-ಭೇದಿಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಹಲವರು ಪಟ್ಟಣದ ಖಾಸಗಿ ಆಸ್ಪತ್ರೆ, ಹಾವೇರಿ ಜಿಲ್ಲಾಸ್ಪತ್ರೆ, ಹುಬ್ಬಳ್ಳಿ, ಧಾರವಾಡ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕನ್ನಕ್ಕನವರ ಹಾಗೂ ಆರೋಗ್ಯ ಸಹಾಯಕ ಶ್ರೀಕಾಂತ ಸರ್ಜಾಪುರ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಂದ ಆರೋಗ್ಯ ವಿಚಾರಿಸಿದರು. ಅಲ್ಲದೆ, ಕುಡಿಯುವ ನೀರು ಪೂರೈಕೆಯಾಗುವ ಮಾಹಿತಿ ಪಡೆದರು.

ಬಳಿಕ ಪಟ್ಟಣದ ಎಲ್ಲ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರ ಸಭೆ ನಡೆಸಿದ ಬಸವರಾಜ ಕನ್ನಕ್ಕನವರ, ಪಟ್ಟಣದ ಪ್ರತಿ ಮನೆಗೆ ಭೇಟಿ ನೀಡಿ ರೋಗದ ಕುರಿತು ಜಾಗೃತಿ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಅಲ್ಲದೆ ಪಟ್ಟಣದಲ್ಲಿರುವ ಪುರಸಭೆಯ ಮತ್ತು ಖಾಸಗಿ ಶುದ್ಧ ನೀರಿನ ಘಟಕಗಳ ನೀರಿನ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಮುಂಜಾಗ್ರತಾ ಕ್ರಮವಾಗಿ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.

ಪಟ್ಟಣದ ಎಲ್ಲ ಮೇಲ್ತೊಟ್ಟಿಗಳನ್ನು ಸ್ವಚ್ಛಗೊಳಸಿ ಪೈಪ್​ಲೈನ್ ಒಡೆದಿರುವುದನ್ನು ಪತ್ತೆ ಹಚ್ಚಿ ದುರಸ್ತಿ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವರದಾ ನದಿ ನೀರು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತಿದೆ. ನದಿ ನೀರನ್ನು ಚೆನ್ನಾಗಿ ಕುದಿಸಿ ಕುಡಿಯುವಂತೆ ಪಟ್ಟಣದಲ್ಲಿ ಡಂಗುರ ಸಾರಲಾಗಿದೆ. ಇನ್ನಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು.
| ರೇಣುಕಾ ದೇಸಾಯಿ ಪುರಸಭೆ ಮುಖ್ಯಾಧಿಕಾರಿ

ವಾಂತಿ-ಭೇದಿ ಉಲ್ಭಣಗೊಳ್ಳುತ್ತಿರುವ ಬಗೆಗೆ ಮಾಹಿತಿ ಪಡೆದುಕೊಳ್ಳಲಾಗಿದ್ದು, ಪರಿಶೀಲನೆಗೆ ವೈದ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ರೋಗ ಹತೋಟಿಗೆ ಮತ್ತು ಚಿಕಿತ್ಸೆಗೆ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಬಂಕಾಪುರ ಆರೋಗ್ಯ ಕೇಂದ್ರದ ವೈದ್ಯರಿಗೆ ಸೂಚಿಸಲಾಗಿದೆ.
| ದೇವರಾಜ ಎಸ್. ಟಿಎಚ್​ಒ ಶಿಗ್ಗಾಂವಿ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...