More

    ವಾಂತಿ ಭೇದಿಯಿಂದ ಬಳಲುತ್ತಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿ : ಮುಖ್ಯವೈದ್ಯಾಧಿಕಾರಿಗೆ ಶಾಸಕ ಡಿ.ಎಸ್.ಹೂಲಗೇರಿ ತಾಕೀತು

    ಲಿಂಗಸುಗೂರು: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ವಾಂತಿ-ಭೇದಿಯಿಂದ ದಾಖಲಾಗಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವತ್ತ ಹೆಚ್ಚಿನ ಗಮನ ಹರಿಸುವಂತೆ ಮುಖ್ಯವೈದ್ಯಾಧಿಕಾರಿ ಡಾ.ಲಕ್ಷ್ಮಪ್ಪರಿಗೆ ಶಾಸಕ ಡಿ.ಎಸ್.ಹೂಲಗೇರಿ ತಾಕೀತು ಮಾಡಿದರು.

    ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಸಂಜೆ ಭೇಟಿ ನೀಡಿ ವಾಂತಿ-ಭೇದಿಯಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು. ದೇವರಭೂಪುರ ಗ್ರಾಮಸ್ಥರು ಸೇದುಬಾವಿಯ ಕಲುಷಿತ ನೀರು ಸೇವನೆಯಿಂದ ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ವೈದ್ಯಾಧಿಕಾರಿ ರೋಗಿಗಳ ಆರೋಗ್ಯ ಸುಧಾರಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

    ಗ್ರಾಮದ ಸೇದುಬಾವಿಯ ನೀರು ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶುದ್ಧ ಕುಡಿವ ನೀರು ಪೂರೈಕೆಗೆ ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾಮಸ್ಥರು ಭಯಪಡುವ ಅಗತ್ಯವಿಲ್ಲ. ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಹೇಳಿದರು.

    ಟಿಎಚ್‌ಒ ರುದ್ರಗೌಡ ಪಾಟೀಲ್, ಡಾ.ಹರ್ಷವರ್ಧನ, ತಹಸೀಲ್ದಾರ್ ಚಾಮರಾಜ ಪಾಟೀಲ್, ತಾಪಂ ಇಒ ಪಂಪಾಪತಿ ಹಿರೇಮಠ, ಪುರಸಭೆ ಸಿಒ ಕೆ.ಕೆ.ಮುತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಮುಖಂಡರಾದ ಪಾಮಯ್ಯ ಮುರಾರಿ, ಎಂ.ಡಿ.ರಫೀ, ಪರಶುರಾಮ ನಗನೂರು, ಇಲಿಯಾಸ್ ಸೇರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts