More

    ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಪಡಿಸಿ – ಪಿ.ಎಸ್. ವಸ್ತ್ರದ

    ವಿಜಯಪುರ: ಪ್ರತಿಯೊಬ್ಬ ಅರ್ಹ ಮತದಾರರು ಅಧಿಕ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿ.ಪಂ. ವಿಜಯಪುರ ಸಹಯೋಗದಲ್ಲಿ ನಗರದ ಲಾಲಬಹಾದ್ದೂರ ಶಾಸ್ತ್ರಿ ಮಾರುಕಟ್ಟೆ ಪ್ರಾಂಗಣದಲ್ಲಿ ಗೋಲಗೇರಿ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರು ರಚಿಸಿದ ಮತದಾನ ಜಾಗೃತಿ ಏಕವ್ಯಕ್ತಿ ವ್ಯಂಗ್ಯ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮತಗಟ್ಟೆ ಕೇಂದ್ರಗಳಲ್ಲಿಯೂ ಮತದಾರರ ಅನುಕೂಲಕ್ಕೆ ಶಾಮಿಯಾನ, ನೆರಳು, ಕುಡಿಯುವ ನೀರು ಮುಂತಾದ ಮೂಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

    ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾದಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಿ ಸಂಗ್ರಹ ಅಭಿಯಾನ, ಮತದಾನ ಜಾಗೃತಿಯ ಟಿ ಶರ್ಟ್ ಬಿಡುಗಡೆ, ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ನಂತರ ಜಿಲ್ಲಾ ಸ್ವೀಪ್ ಸಮಿತಿ ಮೂಲಕ ಮತದಾನ ಜಾಗೃತಿ ಸ್ತಬ್ಧ ಚಿತ್ರ ವೀಕ್ಷಿಸಿದರು. ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರನ್ನು ಸನ್ಮಾನಿಸಲಾಯಿತು.

    ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉಮೇಶ ಶಿರಹಟ್ಟಿಮಠ, ಜಿ.ಪಂ. ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ. ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ರಾಜಶೇಖರ ಧೈವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ, ಡಯಟ್ ಚಿತ್ರಕಲಾವಿದ ಮಂಜುನಾಥ ಮಾನೆ, ಇತರ ಅಧಿಕಾರಿಗಳು ಇದ್ದರು. ಮತದಾನ ಜಾಗೃತಿಯ ವ್ಯಂಗ್ಯಚಿತ್ರಗಳನ್ನು ವೀಕ್ಷಿಸಿ ಜನತೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts