More

    ಅಡವಿಸೋಮಾಪುರದಲ್ಲಿ ಮತದಾನ ಜಾಗೃತಿ 

    ಇಂದು ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಕಳೆದ ಚುನಾವಣೆಗಳಲ್ಲಿ ಕಡಿಮೆ ಮತದಾನ ಪ್ರಮಾಣದ ಕೇಂದ್ರಗಳಿಗೆ ತಾಲೂಕು ಸ್ವೀಪ್ ಸಮಿತಿ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸದರ ಕಾರ್ಯಕ್ರಮದಲ್ಲಿ ಕಳೆದ ಚುನಾವಣೆಗಿಂತ ಈ ಸಲ ಹೆಚ್ಚಿನ ಮತದಾನ ಆಗಬೇಕು. ಆದ್ದರಿಂದ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕ ಎಂದು ತಾಲೂಕು ಸ್ವೀಪ್ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು. 

    ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಇಂದು ಬೆಳಿಗ್ಗೆ ವಾಕ್ ಥಾನ್ ಹಾಗೂ ಮನೆ-ಮನೆ ಭೇಟಿ, ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ಕಾರ್ಯಕ್ರಮದ ನಿಮಿತ್ತ ಮಾತನಾಡಿದ ಅವರು, ಮೇ.7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಜೊತೆಗೆ ನಿಮ್ಮ ಮನೆಯ ಪಕ್ಕದವರಿಗೆ ಮತ್ತು ವಲಸೆ ಹೋದವರಿಗೂ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಇದೆ ಸಂದರ್ಭದಲ್ಲಿ ಹಾಜರಿದ್ದರು ಸರ್ವ ಸಿಬ್ಬಂದಿಗಳು *ಮಾನವ ಸರಪಳಿ* ನಿರ್ಮಿಸಿ ಗ್ರಾಮದಲ್ಲಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು. 

    ಸಾಮಾಜಿಕ ಜಾಲತಾಣಗಳಲ್ಲಿ ಮತದಾನದ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡಬೇಕು. ಗ್ರಾಮದಲ್ಲಿ ವಲಸೆ ಹೋದ ಮತದಾರರಿಗೆ ಮುಂಚಿತವಾಗಿ ತಿಳಿಸಿ ಅವರನ್ನು ಮತದಾನ ದಿನದಂದು ಗ್ರಾಮಕ್ಕೆ ಬಂದು ಮತ ಚಲಾಯಿಸಲು ತಿಳಿಸಬೇಕು ಎಂದು ಹೇಳಿದರು. 

    ಸಹಾಯಕ ನಿರ್ಧೇಶಕ ಕುಮಾರ ಪೂಜಾರ ಮಾತನಾಡಿ, ಭಾರತ ದೇಶದಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆ ಇದೆ. ಮತದಾರರು ಯಾವುದೇ ಆಮೀಷಗಳಿಗೆ ಒಳಗಾಗದೆ ಧೈರ್ಯದಿಂದ ನಿಮ್ಮ ಮತದಾನದ ಹಕ್ಕು ಚಲಾಯಿಸಬೇಕು. ಹೆಚ್ಚೆಚ್ಚು ಮತದಾನ ಆಗುವಂತೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕು ಎಂದರು. 

    ಈ ವೇಳೆ ಪಂಚಾಯತ ಅಭಿವೃದ್ದಿ ಅಧಿಕಾರಿ, ಪಂಚಾಯತ ಸಿಬ್ಬಂದಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರುಗಳು ಹಾಗು ವಿವಿಧ ಇಲಾಖೆ ಸಿಬ್ಬಂದಿ ಹಾಜರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts