More

    ಮತದಾನಕ್ಕೂ ಮುನ್ನ ಸೋಲು ಒಪ್ಪಿಕೊಂಡ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್

    ಬಳ್ಳಾರಿ: ಜಿಲ್ಲೆಯಲ್ಲಿ ಚುನಾವಣೆ ಕಾವು ಗರಿಗೆದರಿದ್ದು, ಇನ್ನು ಮತದಾನಕ್ಕೆ ಎರಡು ದಿನ ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್ ಸೋಲು ಒಪ್ಪಿಕೊಂಡರು.

    ಇದನ್ನೂ ಓದಿ: ಮಾಜಿ ಶಾಸಕ ಅನಿಲ್‌ಲಾಡ್ ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ

    ನಾನು ರಾಜಕೀಯಕ್ಕೆ ಅನರ್ಹ

    ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ಅಂದಾಜು 30 ಸಾವಿರ ಮತ ಪಡೆಯುವ ನಿರೀಕ್ಷೆ ಇದೆ. ಅಷ್ಟು ಮತ ಪಡೆಯದಿದ್ದರೇ ನಾನು ರಾಜಕೀಯಕ್ಕೆ ಅನರ್ಹ ಎಂದು ತಿಳಿದುಕೊಳ್ಳುತ್ತೇನೆ ಎನ್ನುವ ಮೂಲಕ ಸೋಲನ್ನು ಒಪ್ಪಿಕೊಂಡರು.

    ಬಳ್ಳಾರಿ ನಗರದಲ್ಲಿ ಜೆಡಿಎಸ್ ಪ್ರಭಾವ ಕಡಿಮೆ ಇದೆ. ನಮ್ಮ ಪಕ್ಷದ ಪ್ರಣಾಳಿಕೆ, ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದವರಿಗೆ ಅನುಕೂಲವಾಗುವ ರೀತಿ ಸಿದ್ಧತೆ ಮಾಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕೆಆರ್‌ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಈ ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ. ಅವರ ಪಕ್ಷಕ್ಕೆ ಏಕೆ ಮತ ನೀಡಬೇಕು. ಕಾಂಗ್ರೆಸ್ ಅಭ್ಯರ್ಥಿ ಭರತ್ ರೆಡ್ಡಿ ಪಕ್ಷಕ್ಕಾಗಿ ಎಷ್ಟು ವರ್ಷ ದುಡಿದಿದ್ದಾರೆಂದು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

    ಡಿ.ಕೆ.ಶಿವಕುಮಾರ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗಿನಿಂದಲೂ ಇಲ್ಲಿನ ಜೀನ್ಸ್ ಉದ್ಯಮವನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts