More

    ಅಂಬಟ್ಟಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ ನಿರ್ಧಾರ


    ಕೊಗಡು : ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಟ್ಟಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.


    ಮತ ಬಹಿಷ್ಕಾರ ಕುರಿತ ಬ್ಯಾನರ್ ಗಳನ್ನು ಮುಖ್ಯ ರಸ್ತೆಯಲ್ಲಿ ಅಳವಡಿಸಿದ್ದು, ‘ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ, ಚರಂಡಿ, ಶುದ್ಧ ಕುಡಿಯುವ ನೀರು, ದಾರಿದೀಪ ಸೇರಿಂದತೆ ಮೂಲ ಸೌಲಭ್ಯಗಳನ್ನು ಕಲ್ಪಿಸುವವರೆಗೂ ಯಾವುದೇ ಪಕ್ಷಗಳು ಮತ್ತು ಮುಖಂಡರು ಮತಯಾಚನೆಗಾಗಿ ನಮ್ಮ ಗ್ರಾಮವನ್ನು ಪ್ರವೇಶಿಸಬೇಡಿ’ ಎಂದು ಬ್ಯಾನರ್ ನಲ್ಲಿ ಬರೆದು ಪ್ರದರ್ಶಿಸಲಾಗಿದೆ.


    ಗ್ರಾಮಕ್ಕೆ ಕನಿಷ್ಠ ಮೂಲಸೌಕರ್ಯ ಒದಗಿಸಲು ಸಾಧ್ಯವಾಗದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ದುರಂತ. ಬಹುತೇಕ ಬಡತನ ರೇಖೆಗಿಂತ ಕೆಳಗಿನ ಜನರು ಹೆಚ್ಚಾಗಿ ನೆಲೆಸಿರುವ ಈ ಗ್ರಾಮದಲ್ಲಿ ಸರ್ಕಾರ ಕನಿಷ್ಠ ಸೌಲಭ್ಯವನ್ನು ಒದಗಿಸಿಲ್ಲ. ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಮನವಿ ನೀಡುತ್ತಾ ಬಂದಿದ್ದರೂ ಅಂಬಟ್ಟಿ ಗ್ರಾಮವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಕಾರಣದಿಂದ ಇದೀಗ ಗ್ರಾಮ ವಾಸಿಗಳಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಬಹಿಷ್ಕರಿಸುವುದು ಅನಿವಾರ್ಯವಾಗಿದೆ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಮೂಲಸೌಕರ್ಯ ವಂಚಿತ ಅಂಬಟ್ಟಿ ಗ್ರಾಮದ ದುಸ್ಥಿತಿಯ ಬಗ್ಗೆ ಈಗಾಗಲೇ ಹಲವು ಬಾರಿ ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿದೆ. ಅಲ್ಲದೆ ಶಾಸಕರ ಬಳಿ ತೆರಳಿಯೂ ಮನವಿ ಸಲ್ಲಿಸಲಾಗಿದೆ. ಆದರೂ ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಜಲಜೀವನ್ ಯೋಜನೆಯಡಿ ನೀರಿನ ಟ್ಯಾಂಕ್ ಮತ್ತು ಕೊಳವೆಬಾವಿ ಅಳವಡಿಸಿದರೂ ಇದುವರೆಗೂ ನೀರಿನ ಸಂಪರ್ಕ ಕಲ್ಪಿಸಿಲ್ಲ. ಸಂಜೆ ವೇಳೆ ವನ್ಯಪ್ರಾಣಿಗಳ ಹಾವಳಿ ಈ ಭಾಗದಲ್ಲಿ ಹೆಚ್ಚಿದ್ದು, ಇದಕ್ಕಾಗಿ ಬೀದಿ ದೀಪಗಳನ್ನು ಅಳವಡಿಸುವಂತೆ ಒತ್ತಾಯಿಸಿದರೂ ಅದು ಇದುವರೆಗೂ ಅನುಷ್ಠಾನಗೊಂಡಿಲ್ಲ. ಮಳೆಗಾಲದಲ್ಲಿ ರಸ್ತೆಯ ನೀರು ಸರಾಗವಾಗಿ ಹರಿಯಲು ಚಿಕ್ಕ ಚರಂಡಿ ವ್ಯವಸ್ಥೆ ಕೂಡ ಇದುವರೆಗೂ ಸರ್ಕಾರದಿಂದ ಒದಗಿಸಲು ಸಾಧ್ಯವಾಗಿಲ್ಲ ಎಂದು ಎಂದಿರುವ ಅಂಬಟ್ಟಿ ಗ್ರಾಮದ ನಿವೃತ್ತ ಸೈನಿಕ ಎಂ.ಕೆ.ಮುಸ್ತಫಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts