More

    ಪ್ರತಿಯೊಬ್ಬರೂ ಮತ ಚಲಾಯಿಸಿ

    ಬೀಳಗಿ: ಮತದಾನ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಒಂದು ಮತಕ್ಕೆ ದೇಶದ ಇತಿಹಾಸವನ್ನೇ ಬದಲಿಸುವ ಶಕ್ತಿ ಇದೆ. ತಮಗೆ ಬೇಕಾಗುವ ಜನಪ್ರತಿನಿಧಿ ಆಯ್ಕೆ ಮಾಡಿಕೊಳ್ಳುವ ಅವಕಾಶ ನಿಮಗಿದೆ. ಆದ್ದರಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕೆಂದು ತಹಸೀಲ್ದಾರ್ ಸುಹಾಸ ಇಂಗಳೆ ಹೇಳಿದರು.

    ರುದ್ರಗೌಡ ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ಮತದಾರರ ಸಾಕ್ಷರತಾ ಸಂಘದ ಆಶ್ರಯದಲ್ಲಿ ಪಟ್ಟಣದ ಶಿವಾಜಿ ವೃತ್ತದಿಂದ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಕಚೇರಿವರೆಗೆ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    18 ವರ್ಷ ಮೇಲ್ಪಟ್ಟ ಎಲ್ಲರೂ ಕಡಾಯವಾಗಿ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು. ಅಲ್ಲದೆ, ಸುಲಭವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬಹುದು. ಪ್ರತಿಯೊಂದು ಗ್ರಾಮದಲ್ಲಿನ ಬಿಎಲ್‌ಒಗಳ ಮೂಲಕ 18 ವರ್ಷ ಮೇಲ್ಪಟ್ಟವರು ತಮ್ಮ ವಯಸ್ಸಿನ ದಾಖಲಾತಿ ನೀಡಿ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು. 2024 ಜನವರಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಅವಕಾಶವಿದೆ ಎಂದು ತಿಳಿಸಿದರು.

    ಪ್ರೊ. ಎಸ್.ಎನ್. ಮುತ್ತಗಿ ಮಾತನಾಡಿ, ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹ ಪರಿಣಾಮ ಬೀರುವ ಪ್ರಮುಖ ನಾಗರಿಕನ ಕರ್ತವ್ಯವಾಗಿದೆ. ಸರ್ಕಾರ ಅಥವಾ ಅದರ ನೀತಿಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಲು ಮತದಾನವು ಅತ್ಯಂತ ಪ್ರಭಾವಶಾಲಿ ಸಾಧನವಾಗಿದೆ ಎಂದು ತಿಳಿಸಿದರು.

    ಚುನಾವಣಾ ಶಿರಸ್ತೆದಾರ್ ಸಂತೋಷ ರಬಕವಿ, ವಿಷಯ ನಿರ್ವಾಹಕರು ವಿ.ಕೆ. ಪತ್ತಾರ, ರುದ್ರಗೌಡ ಕಾಲೇಜಿನ ಪ್ರಾಧ್ಯಾಪಕ ಬಾಪೂಜಿ ಕಾತರಕಿ, ಡಾ. ಮೌನೇಶ ಕಂಬಾರ, ಪ್ರೊ. ದೇವಣ್ಣ ಬೆನಕನವಾರಿ, ಪ್ರೊ. ಗಂಗಾಧರಜಿ, ಪ್ರೊ. ಎಚ್.ಎಲ್. ಚಲವಾದಿ, ಪ್ರೊ. ಸಿದ್ದಯ್ಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts