More

    ಬಲಿಷ್ಠ ರಾಷ್ಟ್ರಕ್ಕಾಗಿ ಮತ ಚಲಾಯಿಸಿ

    ಸೊರಬ: ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಂಡು ಬಲಿಷ್ಠ ರಾಷ್ಟ್ರ ಕಟ್ಟಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದು ರಾಜ್ಯ ಮಟ್ಟದ ತರಬೇತುದಾರ ನವೀದ್ ಅಹಮ್ಮದ್ ಪರ್ವೀಜ್ ಹೇಳಿದರು.
    ತಾಪಂ ಮತ್ತು ಸ್ವೀಪ್ ಸಮಿತಿಯಿಂದ ಗುರುವಾರ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.
    ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಹಾಗಾಗಿ ಮತದಾನದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲ್ಗೊಂಡು ಹಕ್ಕು ಚಲಾಯಿಸಬೇಕು. ವಿದ್ಯಾರ್ಥಿಗಳು ತಮ್ಮ ಪಾಲಕರು ಹಾಗೂ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಿ ಮತದಾನದಲ್ಲಿ ಭಾಗಿಯಲು ತಿಳಿಸಬೇಕು. ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
    ತಾಪಂ ಇಒ ಡಾ. ಪ್ರದೀಪ್‌ಕುಮಾರ್ ಮಾತನಾಡಿ, ಮತದಾನ ಮಾಡುವುದರಿಂದ ದೇಶದ ದಿಕ್ಕನ್ನೇ ಬದಲಾಯಿಸಬಹುದು. ಸಮುದಾಯ, ನೆರೆಹೊರೆಯವರನ್ನು ಒಗ್ಗೂಡಿಸಿ ದೇಶದ ಭವಿಷ್ಯ ರೂಪಿಸಬಹುದು. ಈ ದಿಸೆಯಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು ಎಂದು ತಿಳಿಸಿದರು.

    ತಹಸೀಲ್ದಾರ್ ಹುಸೇನ್ ಸರಕಾವಸ್ ಕಾರ್ಯಾಗಾರ ಉದ್ಘಾಟಿಸಿದರು. ಬಿಇಒ ಎಂ. ಸತ್ಯನಾರಾಯಣ, ಪುರಸಭೆ ಮುಖ್ಯಧಿಕಾರಿ ಟಿ.ಬಾಲಚಂದ್ರ, ತಾಪಂ ಸಹಾಯಕ ನಿದೇರ್ಶಕ ಶ್ರೀರಾಮ್, ಬಿಆರ್‌ಸಿಯ ಡಿ.ಸಿ.ರಾಘವೇಂದ್ರ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts