More

    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ಗೆ ಮತ ಹಾಕಿದರೆ ಗ್ಯಾರಂಟಿ ವಾಪಸ್​!

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್‌ ತೆಗದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಡಿ.ಕೆ ಶಿವಕುಮಾರ್​ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
    ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
    ಬಿಜೆಪಿ ಮತ್ತು ದಳದವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಅವರ ಈ ಜನವಿರೋಧಿ ಬುದ್ದಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲುಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಸಹ ಕಾಂಗ್ರೆಸ್‌ ಸರ್ಕಾರ ಮಾಡುವುದಿಲ್ಲ ಎಂದರು.
    ಬ್ಲಾಕ್‌, ಜಿಲ್ಲಾ ತಾಲ್ಲೂಕು ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ನಾಯಕರು ಬೂತ್‌ ಮಟ್ಟದಿಂದ ಗ್ಯಾರಂಟಿ ಯೋಜನೆಗಳ ಸಾಧಕ- ಭಾದಕಗಳನ್ನು ಕಡ್ಡಾಯವಾಗಿ ತಿಳಿದುಕೊಂಡು, ಜನರಿಗೆ ಆಗುತ್ತಿರುವ ಅನಾನುಕೂಲ ಮತ್ತು ಅನುಕೂಲ ಎರಡನ್ನೂ ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ಖುದ್ದಾಗಿ ತಿಳಿಯಲು ಮಂತ್ರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
    ಕಾಂಗ್ರೆಸ್​ ಸಂಸ್ಥಾಪಕರ ದಿನದಂದು ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚನೆ ಮಾಡಲಾಗುವುದು. ಮುಂದಿನ ನಾಲ್ಕು ವರ್ಷಗಳಲ್ಲಿ ಯಾರು ಇರುತ್ತಾರೆ ಎನ್ನುವುದೇ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬವೂ ತಿಂಗಳಿಗೆ 5 ಸಾವಿರಕ್ಕೂ ಹೆಚ್ಚು ಹಣವನ್ನು ಉಳಿತಾಯ ಮಾಡುತ್ತಿದೆ. ಇಂತಹ ಚಿನ್ನದ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಜನರಿಗೆ ಕಾರ್ಯಕರ್ತರು ಮನವರಿಕೆ ಮಾಡಬೇಕು ಎಂದು ಕರೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts