More

    ದೇಶಕ್ಕಾಗಿ ಮತದಾನ ಮಾಡಿ

    ಎಚ್.ಡಿ.ಕೋಟೆ: ಭಾರತ ವೇಗವಾಗಿ ಬೆಳೆಯಬೇಕಾದರೆ ಸಮರ್ಥ ನಾಯಕರನ್ನು ಆಯ್ಕೆ ಮಾಡಬೇಕು. ಹೀಗಾಗಿ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಸಂದೇಶ್ ಪ್ರಭು ತಿಳಿಸಿದರು.

    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ತಾಲೂಕು ಕಾನೂನು ಸೇವ ಸಮಿತಿ, ಸರ್ಕಾರಿ ಅಭಿಯೋಜನ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪುರಸಭಾ ಕಾರ್ಯಾಲಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನ ಮತ್ತು ಮತದಾರರ ದಿನಾಚರಣೆಯ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

    ಉತ್ತಮ ನಾಯಕನನ್ನು ಆರಿಸಿಕೊಳ್ಳುವ ಜವಾಬ್ದಾರಿ ನಮ್ಮದಾಗಿರುವುದರಿಂದ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿಯಾಗಬೇಕು, ಅದರಲ್ಲೂ ಯುವ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಸೇರಿಸಿಕೊಳ್ಳಬೇಕು ಎಂದರು.

    ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಜಿ.ಸತೀಶ ಮಾತನಾಡಿ, ಸಂವಿಧಾನದಲ್ಲಿ ಹೇಳಿರುವಂತೆ ಪ್ರತಿಯೊಬ್ಬರೂ ಮತದಾನದಲ್ಲಿ ತೊಡಗಿಕೊಳ್ಳಲು ಪ್ರತಿಜ್ಞೆ ಮಾಡಬೇಕು. ಎಲ್ಲಿ ವಾಸ ಮಾಡುತ್ತಿದ್ದೇವೋ ಅಲ್ಲಿ ಮಾತ್ರ ಮತದಾನ ಮಾಡಲು ಅವಕಾಶ ಇರುತ್ತದೆ. ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ ಕಾನೂನು ಪ್ರಕಾರ ತಪ್ಪು. ಒಂದಕ್ಕಿಂತ ಎರಡು ಕಡೆ ಇದ್ದರೆ ರದ್ದು ಮಾಡಿಕೊಳ್ಳಬೇಕು. ಉಚಿತ ಕಾನೂನು ಸೇವ ಪಡೆಯಲು ಅವಕಾಶ ಇದ್ದು ಯಾರಿಗಾದರೂ ಅವಶ್ಯಕತೆ ಇದೆಯೋ ಅವರು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

    ತಹಸೀಲ್ದಾರ್ ಶ್ರೀನಿವಾಸ್ ಮಾತನಾಡಿ, ಯುವ ಜನತೆ ಮತದಾನದಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಜತೆಗೆ ಹೆಚ್ಚು ಮತದಾರರು ಮತ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವ ದೃಷ್ಟಿಯಿಂದ ಮತದಾರರ ದಿನಾಚರಣೆಯನ್ನು ಜಾರಿಗೆ ತರಲಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಸದೃಢ ದೇಶ ಕಟ್ಟಲು ಯುವ ಸಮೂಹ ಮುಂದಾಗಬೇಕು ಎಂದು ತಿಳಿಸಿದರು.

    ಹಿರಿಯ ನ್ಯಾಯಾಧೀಶ ಸುರೇಶ್ ಎಸ್.ಎನ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಆಶಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಎ.ಸಿ.ರವಿಕುಮಾರ್, ಸರ್ಕಾರಿ ಅಭಿಯೋಜಕರಾದ ಬಿ.ಎಂ.ಮಹಾದೇವು, ಮಹೇಂದ್ರ, ವಕೀಲರಾದ ಎಚ್.ಎಸ್ ದಿನೇಶ್, ಮಣಿರಾಜ್, ನಾಗಶ್ರೀ, ಸರಸ್ವತಿ, ಜವರಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts