More

    ಮತದಾನ ಹೆಚ್ಚಳಕ್ಕೆ ಚುನಾವಣಾಧಿಕಾರಿಗಳ ಸರ್ಕಸ್

    ಮಸ್ಕಿ: ಮತದಾನ ಪ್ರಮಾಣ ಹೆಚ್ಚಳ ಮತ್ತು ಮತದಾರರಲ್ಲಿ ನೈತಿಕ ಜವಾಬ್ದಾರಿ ಕುರಿತು ಶಿಕ್ಷಣ ನೀಡಲು ಚುನಾವಣಾ ಆಯೋಗ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದೆ.

    ಇದನ್ನೂ ಓದಿ: ಅಗತ್ಯ ಸೇವೆಗಳ ಮತದಾನಕ್ಕಾಗಿ ಅಂಚೆ ಮತದಾನ ಕೇಂದ್ರ ಸ್ಥಾಪನೆ

    ಕಳೆದ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶಗಳಿಗಿಂತ ಪಟ್ಟಣ ಪ್ರದೇಶಗಳಲ್ಲಿಯೇ ಮತದಾನ ಪ್ರಮಾಣ ಕಡಿಮೆಯಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು ಕಡಿಮೆ ಮತದಾನ ಆಗಿರುವ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ.

    ಸ್ಟಿಕರ್ ಹಚ್ಚುವುದು, ಮೆಹೆಂದಿ ಕಾರ್ಯಕ್ರಮ ಹಾಗೂ ಸೈಕಲ್ ಜಾಥಾ, ಮದುವೆ ಸಮಾರಂಭಗಳಲ್ಲಿ ಮತದಾನದ ಮಹತ್ವದ ಬಗ್ಗೆ ತಿಳಿಹೇಳುವ ಹಾಡುಗಳ ಹಾಡುತ್ತ, ಬೀದಿ ನಾಟಕ, ಕಿರು ನಾಟಕ ಹೀಗೆ ಅನೇಕ ಕಾರ್ಯಕ್ರಮಗಳ ಮೂಲಕ ಮತದಾನ ಜಾಗೃತಿ ಮೂಡಿಸಲು ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಜತೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದಾರೆ.

    2019ರ ಲೋಕಸಭೆ ಚುನಾವಣೆಯಲ್ಲಿ ಶೇ62ರಷ್ಟು ಮತದಾನವಾಗಿತ್ತು. ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಚಟುವಟಿಕೆ ಮಾಡುತ್ತಿದ್ದಾರೆ. ಚುನಾವಣಾ ಆಯೋಗದ ಶ್ರಮಕ್ಕೆ ಪ್ರತಿಫಲ ನೀಡುತ್ತಾ ಕಾದು ನೋಡಬೇಕಾಗಿದೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ನಡೆದ ಮತದಾನಕ್ಕಿಂತ ಈ ಭಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕೆಂದು ಜನರಲ್ಲಿ ಅರಿವು ಮೂಡಿಸಲು ಹತ್ತು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ.
    | ಜಗದೀಶ ಗಂಗಣ್ಣನವರ್ ಸಹಾಯಕ ಚುನಾವಣಾಧಿಕಾರಿ ಮಸ್ಕಿ ವಿಧಾನಸಭಾ ಕ್ಷೇತ್ರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts