More

    ನಿಮ್ಮ ಮನೆಯ ಮಗನೆಂದು ತಿಳಿದು ಮತ ನೀಡಿ

    ಕೊಡಗು : ಭಾರತ 2047ರ ಹೊತ್ತಿಗೆ ವಿಶ್ವದ ಏಕೈಕ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆಂಬ ಉದ್ದೇಶ ಹೊಂದಿರುವ ಪ್ರಧಾನಿ ನರೇಂದ ್ರ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

    ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಶನಿವಾರಸಂತೆಯ ಯಶಸ್ವಿನಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    ಕಾಂಗ್ರೆಸ್ ಅಧಿಕಾರದಲ್ಲಿ ನಮ್ಮ ದೇಶದ ಅಭಿವೃದ್ಧಿ ಕುಂಟಿತಗೊಂಡಿತ್ತು. ನರೇಂದ್ರಮೋದಿ ಅವರು ಪ್ರಧಾನ ಮಂತ್ರಿ ಆದ ಮೇಲೆ ನಮ್ಮ ದೇಶ ಅಭಿವೃದ್ಧಿಯತ್ತ ಸಾಧಿಸುತ್ತಿರುವ ಜತೆಯಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ವಿಶ್ವದ ಗಮನ ಸೆಳೆದಿದೆ. ವಿಶ್ವವೇ ನಮ್ಮ ದೇಶವನ್ನು ತಿರುಗಿ ನೋಡುತ್ತಿದೆ ಎಂದರು.


    ಮೈಸೂರು ಸಂಸ್ಥಾನದ ರಾಜರು 1917 ರಲ್ಲೇ ರಾಜ್ಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ಆ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಕೊಡುಗೆ ನೀಡಿದರು. ನಾನು ರಾಜ ವಂಶಸ್ಥನಾದರೂ ಜನ ಸಾಮಾನ್ಯರ ಜತೆಯಲ್ಲಿ ಬೆರೆಯುವ ವ್ಯಕ್ತಿಯಾಗಿದ್ದೇನೆ. ನನಗೂ ಸಹ ಸಾಮಾನ್ಯರ ಮೇಲೆ ಕಾಳಜಿ ಇದೆ. ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಚುನಾವಣೆಯಲ್ಲಿ ಮತದಾರರು ಈ ಕ್ಷೇತ್ರದ ಮನೆ ಮಗನೆಂದು ತಿಳಿದು ಮತ ನೀಡುವ ಮೂಲಕ ನನಗೆ ಜನ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.


    ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕಾಂಗ್ರೆಸ್ ಕೇವಲ ಗ್ಯಾರಂಟಿ ಕೊಡುವುದರಲ್ಲೇ ಕಾಲ ಕಳೆಯುತ್ತಿದೆ. ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ, ಈಗ ಲೋಕಸಭಾ ಚುನಾವಣೆಯಲ್ಲಿ 25 ಗ್ಯಾರಂಟಿಗಳನ್ನು ಮುಂದಿಟ್ಟಿದೆ ಎಂದು ಲೇವಡಿ ಮಾಡಿದರು.


    ನಮ್ಮ ದೇಶ ಕಳೆದ 10 ವರ್ಷಗಳಲ್ಲಿ ಸಾಧಿಸಿರುವ ಅಭಿವೃದ್ಧಿಯ ಯೋಜನೆಗಳು ಇದರ ಜತೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ದೇಶದ ಎಲ್ಲ ನಾಗರಿಕರಿಗೂ ಲಸಿಕೆ ಕೊಡಿಸುವ ಮೂಲಕ ದೇಶವನ್ನು ದೊಡ್ಡ ಅಪಾಯದಿಂದ ಕಾಪಾಡಿದ್ದಾರೆ. ಮತ್ತೊಮ್ಮೆ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು. ನಮ್ಮ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.


    ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಮೈಸೂರು-ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ನಾವೆಲ್ಲರು ಗೆಲ್ಲಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಮನೆಮನೆಗೆ ತೆರಳಿ ಅವರಿಗೆ ಮತ ಹಾಕುವಂತೆ ಪ್ರಚಾರ ಮಾಡಬೇಕಿದೆ. ಹಾಗೆಯೇ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆಯಲ್ಲಿ ಗೆಲ್ಲಲು ಪ್ರಚಾರ ಮಾಡುವಂತೆ ಮನವಿ ಮಾಡಿದರು.


    ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ಎಂಎಲ್‌ಸಿ ಸುಜಾ ಕುಶಾಲಪ್ಪ, ಜೆಡಿಎಸ್ ಮುಖಂಡ ವಿಶ್ವ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ಎಸ್.ಜೆ.ಮೇದಪ್ಪ, ಮಾಜಿ ಎಂಎಲ್‌ಸಿ ಸನಿಲ್ ಸುಬ್ರಮಣಿ, ಮಹೇಶ್ ಜೈನ್, ರಾಬೀನ್ ದೇವಯ್ಯ, ಎಸ್.ಎನ್.ರಘು, ಭುವನೇಶ್ವರಿ ಹರೀಶ್, ಜೆಡಿಎಸ್ ಮುಖಂಡ ನಾಗೇಶ್ ಬಿ.ಜೆ.ಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts