More

    ಮತದಾರರ ಜಾಗೃತಿ ಅಭಿಯಾನ

    ಚಿತ್ರದುರ್ಗ: ಜಿಲ್ಲೆಯ 1,206 ಸ್ಥಳಗಳಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ಮತದಾನ ಖಾತ್ರಿ ಯಂತ್ರಗಳ ಕಾರ್ಯವೈಖರಿ ಕುರಿತು ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ತಿಳಿಸಿದರು.

    ಡಿಸಿ ಕಚೇರಿ ಮುಂಭಾಗ ಸೋಮವಾರ ಇವಿಎಂ ಹಾಗೂ ವಿವಿ ಪ್ಯಾಟ್ ಕುರಿತು ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರಿಗೆ ಮತ ಚಲಾಯಿಸುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇವಿಎಂ ಬಳಕೆ ಹಾಗೂ ವಿವಿ ಪ್ಯಾಟ್ ಕಾರ್ಯವೈಖರಿ ಕುರಿತು ಯಾರಲ್ಲಾದರೂ ಅನುಮಾನ, ಗೊಂದಲ ಇದ್ದರೆ ಅದನ್ನು ಬಗೆಹರಿಸಿ ವಿಶ್ವಾಸ ಮೂಡಿಸಲು ಈ ಪ್ರಾತ್ಯಕ್ಷತೆ ಹಮ್ಮಿಕೊಳ್ಳಲಾಗಿದೆ ಎಂದರು.

    ಒಂದು ತಿಂಗಳು ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ಅರ್ಹರು ಪಾಲ್ಗೊಂಡು ಕಲ್ಪಿಸಿ ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಚಲಾವಣೆ ಆಗಿರುವ ಹಾಗೂ ಖಾತ್ರಿ ಮಾಡಿ ಕೊಳ್ಳಲು ಖುದ್ದು ಅವಕಾಶ ನೀಡಲಾಗಿದೆ. ಮೊದಲ ಬಾರಿ ಮತ ಚಲಾಯಿಸುವವರಿಗೆ ಸಹಕಾರಿಯೂ ಆಗಲಿದೆ ಎಂದು ತಿಳಿಸಿದರು. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಏಕಕಾಲಕ್ಕೆ ಜಾಗೃತಿ ಅಭಿಯಾನ ಆರಂಭಿಸಿದ್ದು, 75 ವಾಹನಗಳ ವ್ಯವಸ್ಥೆ ಮಾಡಲಾಗಿದೆ. 152 ಸೆಕ್ಟರ್ ಅಧಿಕಾರಿಗಳು, 7 ಮಂದಿ ಹೆಚ್ಚುವರಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

    ಚಿತ್ರದುರ್ಗ ಕ್ಷೇತ್ರದಲ್ಲಿ 175, ಮೊಳಕಾಲ್ಮೂರು 207, ಚಳ್ಳಕೆರೆ 180, ಹಿರಿಯೂರು 203, ಹೊಸದುರ್ಗ 195, ಹೊಳಲ್ಕೆರೆ ಕ್ಷೇತ್ರದ 246 ಕಡೆ ಹಾಗೂ ಜಿಲ್ಲಾದ್ಯಂತ ನಡೆಯುವ ಪ್ರಮುಖ ಜಾತ್ರೆ, ಸಂತೆಗಳಲ್ಲಿಯೂ ಪ್ರಾತ್ಯಕ್ಷಿತೆ ಆಯೋಜಿಸಲಾಗುವುದು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ತಹಸೀಲ್ದಾರ್ ನಾಗವೇಣಿ, ಚುನಾವಣಾ ತಹಸೀಲ್ದಾರ್ ಎಂ.ಸಂತೋಷ್‌ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts