22.5 C
Bengaluru
Sunday, January 19, 2020

ಮತದಾರರ ಕರಡು ಪ್ರತಿ ಲೋಪ ಸರಿಪಡಿಸಿ

Latest News

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಶಿಕಾರಿಪುರ: ಮತದಾರರ ಕರಡು ಪ್ರತಿಯಲ್ಲಿನ ಲೋಪಗಳನ್ನು ಸರಿಪಡಿಸಿ ಅಂತಿಮ ಪಟ್ಟಿ ಪ್ರಕಟಿಸುವ ಮುನ್ನ ಮತ್ತೊಮ್ಮೆ ಕರಡು ಪ್ರತಿಯನ್ನು ಪ್ರಕಟಿಸಿ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ಕೊಟ್ಟ ನಂತರವೇ ಪುರಸಭೆಯ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಗುರುಮೂರ್ತಿ ಮಾತನಾಡಿ, ನೂತನ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಅಕ್ರಮಗಳಾಗಿದ್ದು ಲೋಪದೊಷಗಳನ್ನು ಸರಿಪಡಿಸಬೇಕು. ಶಿಕಾರಿಪುರ ಹಾಗೂ ಶಿರಾಳಕೊಪ್ಪ ಎರಡೂ ಕಡೆ ಪಟ್ಟಿಯಲ್ಲಿ ಅಕ್ರಮವಾಗಿರುವುದು ಕಂಡು ಬರುತ್ತಿದೆ ಎಂದರು.

ಹಲವು ವಾರ್ಡ್​ಗಳ ಮತದಾರರ ಪಟ್ಟಿ ಬಗ್ಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣಾ ಅರ್ಜಿಗೆ ಸಂಭಂದಿಸಿದಂತೆ ಅರ್ಜಿದಾರರ ಸಮಕ್ಷಮದಲ್ಲಿ ಈ ವರೆಗೂ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ ಹಾಗೂ ಉಪೇಕ್ಷೆ ಹೀಗೆ ಮುಂದುವರಿದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಚುನಾವಣಾ ಆಯೋಗದ ಆದೇಶದ ಪ್ರಕಾರ ಜನವರಿ 2ರೊಳಗೆ ಪುರಸಭೆಯ ಅಂತಿಮಪಟ್ಟಿ ತಯಾರಿಸಬೇಕು. ಆದರೆ ಅದಕ್ಕೂ ಮುನ್ನಾ ಈಗ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯನ್ನು ಅದಕ್ಕೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಇತ್ಯರ್ಥಗೊಳಿಸಿ ಮತ್ತೊಮ್ಮೆ ಮತದಾರರ ಪಟ್ಟಿಯನ್ನು ಸಾರ್ವಜನಿಕವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕು. ಅಕ್ರಮ ಎಸಗಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಸೀಲ್ದಾರ್​ಗೆ ಮನವಿ ಸಲ್ಲಿಸಿದರು.

ಪ್ರಮುಖರಾದ ಕೊಳಗಿ ರೇವಣಪ್ಪ, ಎಂ.ಬಿ.ಚನ್ನವೀರಪ್ಪ, ವಸಂತಗೌಡ, ಗುರುಪ್ರಸಾದ್ ದೀಕ್ಷಿತ್, ಎಸ್.ಬಾಲಕೃಷ್ಣ ಜೋಯಿಸ್, ಪ್ರವೀಣ ಶೆಟ್ಟಿ, ಸಣ್ಣ ಹನುಮಂತಪ್ಪ, ಸುಕೇಂದ್ರಪ್ಪ, ಡಿ.ಎಸ್.ಈಶ್ವರಪ್ಪ, ಪಾಲಾಕ್ಷಪ್ಪ, ದೂಪದಹಳ್ಳಿ ರವಿ, ಬಿ.ಎಚ್.ನಾಗರಾಜಪ್ಪ ಮತ್ತಿತರರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...